alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರಿನಲ್ಲಿ ಲಾಠಿ ಚಾರ್ಜ್, ನಿಷೇಧಾಜ್ಞೆ ಜಾರಿ

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉದ್ರಿಕ್ತರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ಬಳಿಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಎನ್.ಆರ್. ಕ್ಷೇತ್ರ ವ್ಯಾಪ್ತಿಯ ಕ್ಯಾತಮಾರನಹಳ್ಳಿಯಲ್ಲಿ ಘಟನೆ ನಡೆದಿದೆ. ಆಸೀಫಾ ಪ್ರಕರಣದ ಹಿನ್ನಲೆಯಲ್ಲಿ ಸಂಘಟನೆಯೊಂದರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಂತರ ಬಲವಂತವಾಗಿ ಬಂದ್ ಮಾಡಿಸಲು ಮುಂದಾಗಿದ್ದಾರೆ.

ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಲು ಮುಂದಾಗಿದ್ದರಿಂದ ಸ್ಥಳದಲ್ಲಿದ್ದ ಪೊಲೀಸರು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಉದ್ರಿಕ್ತರ ಗುಂಪು, ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದೆ. ಈ ಸಂದರ್ಭದಲ್ಲಿ ಎಸ್.ಐ. ಅನಿಲ್ ಕುಮಾರ್ ಅವರ ತಲೆಗೆ ಕಲ್ಲೇಟು ಬಿದ್ದು ಗಂಭೀರವಾದ ಗಾಯಗಳಾಗಿವೆ. ಘಟನೆಯಲ್ಲಿ 8 ಪೊಲೀಸರು ಗಾಯಗೊಂಡಿದ್ದಾರೆ.

ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಪ್ರಕ್ಷುಬ್ಧ ವಾತಾವರಣದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಸರ್ಪಗಾವಲು ಹಾಕಿ ಪರಿಸ್ಥಿತಿ ತಿಳಿಗೊಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...