alex Certify
ಕನ್ನಡ ದುನಿಯಾ       Mobile App
       

Kannada Duniya

‘ದಲಿತ ಅರ್ಚಕರ ನೇಮಕಕ್ಕೆ ವಿರೋಧವಿಲ್ಲ’

ಮೈಸೂರು: ಕೇರಳದಲ್ಲಿ ಮುಜರಾಯಿ ದೇವಾಲಯಗಳಿಗೆ ದಲಿತ ಅರ್ಚಕರನ್ನು ನೇಮಕ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ದಲಿತ ಅರ್ಚಕರ ನೇಮಕಕ್ಕೆ ವಿರೋಧವಿಲ್ಲ ಎಂದು ತಿಳಿಸಿದ್ದಾರೆ.

ನಾವೂ ದಲಿತ ಅರ್ಚಕರನ್ನು ನೇಮಕ ಮಾಡುವ ಕುರಿತು ಮುಕ್ತ ಮನಸ್ಸು ಹೊಂದಿದ್ದೇವೆ ಎಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಮಳೆಯಾಗಲು ನಾನು ಕಾರಣವಲ್ಲ. 1983 ರಿಂದಲೂ ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಈ ಬಾರಿ ಅತಿಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಹಿಂದಿನ ಸರ್ಕಾರಗಳು ಏನೂ ಮಾಡಿರಲಿಲ್ಲ. ನಮ್ಮ ಸರ್ಕಾರ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ರಸ್ತೆ ಗುಂಡಿಗಳನ್ನು ಮುಚ್ಚಿದೆ ಎಂದು ಹೇಳಿದ್ದಾರೆ.

ಬಿಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹರಿಹಾಯ್ದ ಸಿ.ಎಂ., ಆರ್ಥಿಕ ವ್ಯವಸ್ಥೆ ಬಗ್ಗೆ ಅವರಿಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ಟೀಕಿಸಿದ್ದಾರೆ.

ವಿಧಾನಸೌಧ ವಜ್ರಮಹೋತ್ಸವ ಸಮಾರಂಭದ ಹಿನ್ನಲೆಯಲ್ಲಿ ಶಾಸಕರಿಗೆ ಚಿನ್ನದ ಬಿಸ್ಕೆಟ್ ನೀಡುತ್ತಿರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...