alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲ್ಫಿ ವಿಡಿಯೋದೊಂದಿಗೆ ಆತ್ಮಹತ್ಯೆಗೆ ಯತ್ನ

ಮೈಸೂರು: ಸೆಲ್ಫಿ ವಿಡಿಯೋ ಮಾಡುತ್ತಾ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ದೇವರಾಜ ಅರಸ್ ರಸ್ತೆಯಲ್ಲಿ ನಡೆದಿದೆ.

ಕಾಫಿ ಡೇ ಉದ್ಯೋಗಿ, ಮಂಡ್ಯ ಜಿಲ್ಲೆ ಮಳವಳ್ಳಿಯ ಯೋಗೇಶ್ ಆತ್ಮಹತ್ಯೆಗೆ ಯತ್ನಿಸಿದವರು. ಮ್ಯಾನೇಜರ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಕಟ್ಟಡದ ಮೇಲೇರಿದ ಯೋಗೇಶ್, ಸೆಲ್ಫಿ ವಿಡಿಯೋ ಮಾಡುತ್ತಾ ಜೋರಾಗಿ ಕಿರುಚಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ದೇವರಾಜ ಠಾಣೆ ಪೊಲೀಸರು ಹಾಗೂ ಕಾಫಿ ಡೇ ಸಿಬ್ಬಂದಿ ಯೋಗೇಶ್ ಮನವೊಲಿಸಿ ಆತನನ್ನು ಕೆಳಕ್ಕೆ ಇಳಿಸಿದ್ದಾರೆ.

ಮ್ಯಾನೇಜರ್ ಪದೇ, ಪದೇ ವರ್ಗಾವಣೆ ಮಾಡುವ ಮೂಲಕ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಯೋಗೇಶ್ ಆರೋಪಿಸಿದ್ದಾರೆ.

ಆದರೆ, ಇದನ್ನು ಅಲ್ಲಗಳೆದಿರುವ ಮ್ಯಾನೇಜರ್, ಆತನಿಗೆ ಯಾವುದೇ ಕಿರುಕುಳ ನೀಡಿಲ್ಲ. ಮಾನಸಿಕ ಖಿನ್ನತೆಯಿಂದ ಆತ ಬಳಲುತ್ತಿದ್ದು, ಅವರ ಕುಟುಂಬದವರನ್ನು ಕರೆಸಿ ಹಿಂದೆಯೇ ಮಾತನಾಡಲಾಗಿದೆ. ಆತನಿಗೆ ಅನುಕೂಲವಾದ ಸ್ಥಳದಲ್ಲೇ ಕೆಲಸಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಪೊಲೀಸರು ಯೋಗೇಶ್ ಮನವೊಲಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...