alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಲಾಸ್ ರೂಂನಲ್ಲೇ ಶಿಕ್ಷಕನಿಂದ ಹೀನಕೃತ್ಯ

ಮೈಸೂರು: ಶಾಲೆಯಲ್ಲಿ ಮಕ್ಕಳಿಗೆ ನೀತಿ ಪಾಠ ಮಾಡಬೇಕಿದ್ದ ಶಿಕ್ಷಕನೊಬ್ಬ, ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ.

ಲಕ್ಷ್ಮಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕ ತರಗತಿಯಲ್ಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮೈ ಕೈ ಮುಟ್ಟಿ ಅನುಚಿತವಾಗಿ ವರ್ತಿಸಿದ ಶಿಕ್ಷಕನ ಬಗ್ಗೆ ಭಯಗೊಂಡ ವಿದ್ಯಾರ್ಥಿನಿಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಪೋಷಕರು ಶಾಲೆಗೆ ಆಗಮಿಸಿ, ಶಿಕ್ಷಕನನ್ನು ಪ್ರಶ್ನಿಸಿದ್ದು, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಶಿಕ್ಷಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...