alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ವರುಣಾ ಕ್ಷೇತ್ರದಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮೈಸೂರಿನ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಯಡಿಯೂರಪ್ಪ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ್ದು, ಹೋಟೆಲ್ ಎದುರು ಜಮಾವಣೆಗೊಂಡ ವಿಜಯೇಂದ್ರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪಕ್ಷದ ನಾಯಕರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ದಿಢೀರ್ ರಸ್ತೆ  ತಡೆ ಕೂಡ ನಡೆಸಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡು ಸಾರ್ವಜನಿಕರಿಗೆ ತೊಂದರೆಯಾಗಿದೆ.

ಈ ಮೊದಲು ಯಡಿಯೂರಪ್ಪ, ಮಾಜಿ ಸಚಿವ ರಾಮದಾಸ್ ಅವರಿಗೆ ಮುತ್ತಿಗೆ ಹಾಕಿ ವಿಜಯೇಂದ್ರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರಾದರೂ, ಕಾರ್ಯಕರ್ತರು ಬಿಗಿಪಟ್ಟು ಹಿಡಿದ ಕಾರಣ, ಗುಂಪು ಚದುರಿಸಲು ಲಾಠಿ ಪ್ರಹಾರ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...