alex Certify
ಕನ್ನಡ ದುನಿಯಾ       Mobile App
       

Kannada Duniya

ಅನಾಹುತಕ್ಕೆ ಕಾರಣವಾಯ್ತು ಯುವಕ–ಗೃಹಿಣಿ ಸಂಬಂಧ

ಮೈಸೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಯುವಕ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.

ಮಹಿಳೆ, ಮನೆಗೆ ಬಂದು ಗಲಾಟೆ ಮಾಡಿದ್ದರಿಂದ ಆಕ್ರೋಶಗೊಂಡ ಯುವಕ, ಮಹಿಳೆಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

26 ವರ್ಷದ ಗೃಹಿಣಿಯೊಂದಿಗೆ ಪ್ರವೀಣ್ ಎಂಬ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಇಬ್ಬರ ನಡುವೆ ಜಗಳವಾಗಿದೆ. ರಾತ್ರಿ ಯುವಕನ ಮನೆ ಬಳಿ ಬಂದ ಮಹಿಳೆ ಗಲಾಟೆ ಮಾಡಿದ್ದಾರೆ.

ಬೆಳಿಗ್ಗೆ ಮಹಿಳೆಯ ಮನೆಗೆ ಹೋದ ಯುವಕ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದು, ಲಾಡ್ಜ್ ಒಂದರ ಬಳಿ ಆತ್ಮಹತ್ಯೆಗೆ ಯತ್ನಿಸಿ ತಂದೆಗೆ ಕರೆ ಮಾಡಿದ್ದಾನೆ. ಸ್ಥಳಕ್ಕೆ ಧಾವಿಸಿ ಬಂದ ಆತನ ತಂದೆ ಮನವೊಲಿಸಿ ಕೆಳಗೆ ಇಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹುಣಸೂರು ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...