alex Certify
ಕನ್ನಡ ದುನಿಯಾ       Mobile App
       

Kannada Duniya

ಮೃಗಾಲಯಕ್ಕೆ ನುಗ್ಗಿದ ಚಿರತೆ: ಆತಂಕದಲ್ಲಿ ಪ್ರವಾಸಿಗರು

ಮೈಸೂರು: ಮೈಸೂರು ಶ್ರೀಚಾಮರಾಜೇಂದ್ರ ಮೃಗಾಲಯಕ್ಕೆ ಚಿರತೆಯೊಂದು ನುಗ್ಗಿದ್ದು, ಪ್ರವಾಸಿಗರು ಹಾಗೂ ಮೃಗಾಲಯದ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ.

ಚಾಮುಂಡಿ ಬೆಟ್ಟದ ಸಮೀಪದಲ್ಲಿರುವ ಕಿರು ಅರಣ್ಯ ಪ್ರದೇಶದಿಂದ ಚಿರತೆ ಬಂದಿರಬಹುದೆಂದು ಹೇಳಲಾಗಿದೆ. ಮೃಗಾಲಯದಲ್ಲಿನ ಮರದ ಮೇಲಿದ್ದ ಚಿರತೆಯನ್ನು ಕಂಡವರು ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಮೃಗಾಲಯದಲ್ಲಿದ್ದ ಪ್ರವಾಸಿಗರನ್ನು ಹೊರಗೆ ಕಳಿಸಲಾಗಿದೆ. ಪ್ರವಾಸಿಗರಿಗೆ ಮೃಗಾಲಯ ಪ್ರವೇಶವನ್ನು ಸ್ಥಗಿತಗೊಳಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿದೆ.

ಚಿರತೆ ಮರದ ತುದಿಯಲ್ಲಿ ಕುಳಿತಿರುವುದರಿಂದ ಅರವಳಿಕೆ ಚುಚ್ಚುಮದ್ದು ನೀಡಲು ಕಷ್ಟಸಾಧ್ಯವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...