alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ನಿಂದ ಶಾಸಕ ಹ್ಯಾರಿಸ್ ಪುತ್ರನ ಉಚ್ಚಾಟನೆ

ಬೆಂಗಳೂರು: ಗೂಂಡಾಗಿರಿ ನಡೆಸಿ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲಪಾಡ್ ಹ್ಯಾರಿಸ್ ಅವರನ್ನು ಕಾಂಗ್ರೆಸ್ ನಿಂದ ಉಚ್ಚಾಟಿಸಲಾಗಿದೆ.

ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಮಹಮ್ಮದ್ ನಲಪಾಡ್ ಹ್ಯಾರಿಸ್ ರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪದಲ್ಲಿರುವುದರಿಂದ ಡ್ಯಾಮೇಜ್ ಕಂಟ್ರೋಲ್ ಗೆ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ತಪ್ಪು ಯಾರು ಮಾಡಿದ್ದರೂ ತಪ್ಪೇ. ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಕೂಡಲೇ ಕ್ರಮಕೈಗೊಳ್ಳಲು ಅವರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...