alex Certify
ಕನ್ನಡ ದುನಿಯಾ       Mobile App
       

Kannada Duniya

ಎಲ್ಲೆಡೆ ಸಂಭ್ರಮದ ನಾಗರಪಂಚಮಿ

nagarapanchami

ನಾಗರಪಂಚಮಿ ನಾಡಿಗೆ ದೊಡ್ಡದು ಎಂಬ ಮಾತು ಪ್ರಚಲಿತದಲ್ಲಿದೆ. ನಾಗರ ಚೌತಿಯ ನಂತರ ಬರುವ ನಾಗಪಂಚಮಿಯನ್ನು ನಾಡಿನೆಲ್ಲೆಡೆ ವಿಶೇಷವಾಗಿ ಆಚರಿಸಲಾಗುತ್ತಿದೆ. ದೇವಾಲಯಗಳಲ್ಲಿಯೂ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಸಲಾಗಿದೆ.

ನಾಗರ ಪಂಚಮಿಯಂದು ಕಲ್ಲಿನ ನಾಗರಕ್ಕೆ, ಕೆಲವು ಕಡೆಗಳಲ್ಲಿ ಹುತ್ತದ ಮಣ್ಣಿನಿಂದ ಮಾಡಿದ ಮಣ್ಣಿನ ನಾಗರಕ್ಕೆ ಹಾಲೆರೆಯುವುದು ರೂಢಿಯಲ್ಲಿದೆ. ಹುತ್ತಗಳಿಗೆ ದೇವಾಲಯ ಮೊದಲಾದ ಕಡೆಗಳಲ್ಲಿರುವ ನಾಗರ ಕಲ್ಲುಗಳಿಗೆ ನಾಗರ ಪಂಚಮಿಯಂದು ಹಾಲೆರೆಯಲಿದ್ದು, ಇಂದು ರಾಜ್ಯದಲ್ಲಿ ನಾಗರ ಪಂಚಮಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಘಾಟಿ ಸುಬ್ರಹ್ಮಣ್ಯ ಮೊದಲಾದ ಕಡೆಗಳಲ್ಲಿ ಹಾಗೂ ನಾಗ ದೇವಾಲಯಗಳಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.

ಭಾನುವಾರವೇ ನಾಗರಪಂಚಮಿ ಬಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮನೆಗಳಲ್ಲಿಯೂ ನಾಗರ ಪಂಚಮಿ ಹಬ್ಬದ ಸಡಗರ ಸಂಭ್ರಮ ಕಂಡು ಬಂದಿದೆ. ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳಲ್ಲಿ ನಾಗರಪಂಚಮಿಗೆ ವಿಶೇಷ ಸ್ಥಾನವಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...