alex Certify
ಕನ್ನಡ ದುನಿಯಾ       Mobile App
       

Kannada Duniya

ಏರಿಕೆಯಾಗುತ್ತೆ ನಂದಿನಿ ಹಾಲಿನ ದರ

nadinid-milkkkk

ಮಡಿಕೇರಿ: ನಂದಿನಿ ಹಾಲಿನ ದರವನ್ನು ಏರಿಕೆ ಮಾಡಲಾಗುವುದು ಎಂದು ಪಶು ಸಂಗೋಪನಾ ಖಾತೆ ಸಚಿವ ಎ. ಮಂಜು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಹೈನುಗಾರಿಕೆಯಲ್ಲಿ ತೊಡಗಿರುವ ರೈತರು ಸಂಕಷ್ಟದಲ್ಲಿರುವುದರಿಂದ ಹಾಲಿನ ದರ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರೈತರಿಗೆ ನೆರವಾಗಲು ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಹಾಲು ಒಕ್ಕೂಟಗಳು ಕೂಡ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಮಾಹಿತಿ ನೀಡಿದ್ದಾರೆ.

ಪ್ರತಿ ಲೀಟರ್ ಹಾಲಿನ ಬೆಲೆಯನ್ನು ಎಷ್ಟು ಏರಿಕೆ ಮಾಡಬೇಕೆಂಬುದರ ಕುರಿತು ಇನ್ನೂ ತೀರ್ಮಾನಿಸಿಲ್ಲ. ಶೀಘ್ರವೇ ಏರಿಕೆ ಮಾಡಲಿದ್ದು, ಇದನ್ನು ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...