alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ಬೆಳಗಾವಿಗೆ ಬರ್ತಿದ್ದಾರೆ ಪ್ರಧಾನಿ ಮೋದಿ

12Narendra-Modi-1

ಪ್ರಧಾನಿ ಮೋದಿ ಅವರು ಇಂದು ಬೆಳಗಾವಿಗೆ ಆಗಮಿಸಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದು, ರಾಜ್ಯದ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಸಾಧ್ಯತೆ ಇದೆ.

ಬರಗಾಲ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿರುವ ರೈತ ಸಮುದಾಯಕ್ಕೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಫಸಲ್ ಬಿಮಾ ಯೋಜನೆಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದು, ಸಾವಗಾಂವದ ಅಂಗಡಿ ತಾಂತ್ರಿಕ ಮಹಾವಿದ್ಯಾಲಯದ ಮೈದಾನದಲ್ಲಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಲ್ಲದೇ ಈ ಸಮಯದಲ್ಲಿ ನೆನೆಗುದಿಗೆ ಬಿದ್ದಿರುವ ಮಹದಾಯಿ, ಕಳಸಾ ಬಂಡೂರಿ ಯೋಜನೆ ವಿಚಾರದ ಕುರಿತಾಗಿಯೂ ಮೋದಿ ಅವರು ತಮ್ಮ ನಿಲುವು ಪ್ರಕಟಿಸುವ ಸಾಧ್ಯತೆ ಇದ್ದು, ಇದರ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಬಲಿಸುವ ಮೂಲಕ ‘ಹುಟ್ಟು ಹಬ್ಬ’ದ ಉಡುಗೊರೆ ನೀಡುವ ಸಾಧ್ಯತೆ ಇದೆ.

ಈಗಾಗಲೇ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಬೆಳಗಾವಿಯಾದ್ಯಂತ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದ್ದು, 2,500 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಲಕ್ಷಕ್ಕೂ ಅಧಿಕ ರೈತರು ಪಾಲ್ಗೊಳ್ಳಲಿರುವ ಈ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ವ್ಯವಸ್ಥೆ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...