alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಸ್ಪರ್ಧೆ ಕುರಿತು ಯಡಿಯೂರಪ್ಪ ಹೇಳಿದ್ದೇನು ಗೊತ್ತಾ?

ಕರ್ನಾಟಕದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡದಿಂದ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಬೀದರ್ ನಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹದ ಸುದ್ದಿಗಳು ಹರಿದಾಡುತ್ತಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಮೋದಿಯವರು ರಾಜ್ಯದಿಂದ ಸ್ಪರ್ಧಿಸುತ್ತಾರೆ ಎಂಬ ವಿಚಾರ ಸುಳ್ಳು ಹಾಗೂ ರಾಹುಲ್ ಗಾಂಧಿಯವರು ಬೇರೆ ಭಾಗದಲ್ಲಿ ಚುನಾವಣೆಯಲ್ಲಿ ಗೆಲ್ಲುವುದಿಲ್ಲವೆಂಬ ಕಾರಣಕ್ಕಾಗಿ ಬೀದರ್ ನಲ್ಲಿ ಸ್ಪರ್ಧೆಗೆ ಮುಂದಾಗಿದ್ದು, ಅಲ್ಲಿಯೂ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದ್ದಾರೆ.

ಅಲ್ಲದೇ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ, ಪ್ರಧಾನಿಯಾಗಿದ್ದ ದೇವೇಗೌಡರು ಉತ್ತರ ಕರ್ನಾಟಕಕ್ಕೆ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿರುವ ಯಡಿಯೂರಪ್ಪನವರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ಮರೆತಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...