alex Certify
ಕನ್ನಡ ದುನಿಯಾ       Mobile App
       

Kannada Duniya

ಉಡುಗೊರೆ ಬದಲು ಮೋದಿಯವರಿಗೆ ಮತ ನೀಡುವಂತೆ ಕೇಳಿದ ವರ…!

ಸಾಮಾಜಿಕ ಜಾಲತಾಣಗಳಲ್ಲಿ ವಿವಾಹ ಆಮಂತ್ರಣ ಪತ್ರಿಕೆಯೊಂದು ವೈರಲ್ ಆಗಿದೆ. ಮಂಗಳೂರು ಮೂಲದ ಪ್ರವೀಣ್ ಹಾಗೂ ಹೇಮಲತಾ ಎಂಬವರು ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ, ಉಡುಗೊರೆ ಬದಲು 2019 ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.

ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಸರ್ಕಾರದ ಪ್ರಮುಖ ಸಾಧನೆಗಳನ್ನೂ ಪ್ರಸ್ತಾಪ ಮಾಡಿರುವ ಇವರುಗಳು, ಭಾರತವನ್ನು ವಿಶ್ವ ಗುರು ಸ್ಥಾನಕ್ಕೇರಿಸಲು ಪ್ರಯತ್ನಿಸುತ್ತಿರುವ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲು ಬಿಜೆಪಿಗೆ ಮತ ನೀಡಿ ಎಂದಿದ್ದಾರೆ.

ವಿವಾಹಕ್ಕೆ ನೀವು ಆಗಮಿಸುವುದೇ ನಮಗೆ ಆಶೀರ್ವಾದವೆಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಲಾಗಿದ್ದು, ನಮಗೆ ಉಡುಗೊರೆ ನೀಡುವ ಬದಲು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವ ಮೂಲಕ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲು ಬೆಂಬಲಿಸಿ ಎಂದು ಮನವಿ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...