alex Certify
ಕನ್ನಡ ದುನಿಯಾ       Mobile App
       

Kannada Duniya

ನರೇಂದ್ರ ಮೋದಿಯನ್ನು ‘ಸುಳ್ಳುಗಾರ’ ಪ್ರಧಾನಿ ಎಂದು ಜರೆದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದವರೆಂದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಹೇಳಿದ್ದಾರೆ.

ಗದಗ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಸಾಧನೆಗಳ ಪಟ್ಟಿ ನೀಡುತ್ತಿದ್ದರೆ, ಬಿಜೆಪಿ ಬಳಿ ಜೈಲಿಗೆ ಹೋಗಿ ಬಂದವರ ಪಟ್ಟಿ ಇದೆ ಎಂದು ವ್ಯಂಗ್ಯವಾಡಿದ್ದಾರೆ.

ಗ್ಯಾಸ್ ಹಾಗೂ ಪೆಟ್ರೋಲ್-ಡೀಸೆಲ್ ಬೆಲೆ ದುಬಾರಿಯಾಗಿದೆ. ಮೋದಿಯವರು ಅಚ್ಚೆ ದಿನ್, ಅಚ್ಚೆ ದಿನ್ ಎಂದು ಹೇಳುತ್ತಾರೆ. ಇದೇನಾ ಅಚ್ಚೇ ದಿನ್ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜೊತೆಗೆ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಖಚಿತ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...