alex Certify
ಕನ್ನಡ ದುನಿಯಾ       Mobile App
       

Kannada Duniya

ಮೇ 5 ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗಕ್ಕೆ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಹುಲಿ ಇದ್ದಂತೆ. ಹುಲಿಯ ತಂಟೆಗೆ ಯಾರಾದರೂ ಬಂದರೆ ಅವರ ಕಥೆ ಅಷ್ಟೆ. ಚಾಣಕ್ಯ ಅಮಿತ್ ಶಾ ರಾಜ್ಯ ಭೇಟಿಯಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಇದೀಗ ರಾಜ್ಯಕ್ಕೆ ಹುಲಿ ಚಂದ್ರಗುಪ್ತ ಮೌರ್ಯ (ನರೇಂದ್ರ ಮೋದಿ) ಭೇಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಂತಹ ಇಲಿಗಳು ಬಿಲ ಸೇರಿಕೊಳ್ಳಲಿವೆ ಎಂದು ಛೇಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಹಿಂದ ವರ್ಗಕ್ಕೆ ಆಗಿರುವ ಅನ್ಯಾಯ ಪ್ರತಿಯೊಬ್ಬರಿಗೂ ತಿಳಿದಿದೆ. ಹಿಂದ ವರ್ಗದೆಡೆಗಿನ ತಾತ್ಸಾರ ಮನೋಭಾವದಿಂದಾಗಿ ಕಾಂಗ್ರೆಸ್ ನ ಹಲವರು ಬೇಸರಗೊಂಡಿದ್ದಾರೆ ಎಂದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದ ವರ್ಗದ ಕಲ್ಯಾಣಕ್ಕೆ ಅನೇಕ ಕಾರ್ಯಕ್ರಮ ಕೈಗೊಳ್ಳಲಾಗಿತ್ತು. ಭೋವಿ, ಬಣಜಾರ, ಅಂಬೇಡ್ಕರ್ ಅಭಿವೃದ್ದಿ ನಿಗಮ ಸ್ಥಾಪಿಸುವ ಮೂಲಕ ಅತಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿತ್ತು. ಆದರೆ ಈಗಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇವಲ ಬೊಗಳೆ ಸರ್ಕಾರವಾಗಿದೆ. ಹಿಂದ ವರ್ಗಕ್ಕೆ ಯಾವುದೇ ಅಭಿವೃದ್ದಿ ಕಾರ್ಯಕ್ರಮ ನೀಡದೇ ದ್ರೋಹ ಎಸಗಿದೆ ಎಂದು ದೂರಿದರು.

ಇದರಿಂದಾಗಿ ಹಿಂದ ವರ್ಗದವರು ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಿಂದ ಮುಕ್ತಿಗೊಳಿಸುವುದಕ್ಕೆ ಮುಂದಾಗಿದ್ದಾರೆ. ಸದ್ಯದಲ್ಲೇ ಕರ್ನಾಟಕದಲ್ಲೂ ಕಾಂಗ್ರೆಸ್ ಮುಕ್ತವಾಗುವುದು ಯಶಸ್ವಿಯಾಗುತ್ತದೆ ಎಂದು ಭವಿಷ್ಯ ನುಡಿದರು.

ಮೇ 2 ರಂದು ವಿಪ್ರ ಸಮಾಜದ ಬೃಹತ್ ಸಮಾವೇಶ ಶಿವಮೊಗ್ಗದಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಪ್ರಹ್ಲಾದ್ ಜೋಷಿ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿರುವರು ಎಂದು ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...