alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹಾಗೂ ಮೂಢನಂಬಿಕೆ ವಿರೋಧಿ ಹೋರಾಟಗಾರ, ವಿಚಾರವಾದಿ ಮಹಾರಾಷ್ಟ್ರದ ನರೇಂದ್ರ ದಾಬೋಲ್ಕರ್ ಹತ್ಯೆಗೂ ಪರಸ್ಪರ ನಂಟಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಬಹಿರಂಗಗೊಳಿಸಿದ್ದಾರೆ.

ಗೌರಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಆರೋಪಿ ಅಮೋಲ್ ಕಾಳೆ ಬಳಿ ಡೈರಿಯೊಂದು ಸಿಕ್ಕಿದ್ದು, ಈ ಡೈರಿಯಲ್ಲಿ ದಾಬೋಲ್ಕರ್ ಹತ್ಯೆ ಪ್ರಕರಣದ ಆರೋಪಿ ಪ್ರಕಾಶ್ ರಾವ್ ಅಂದುರೆ ಎಂಬಾತನ ಹೆಸರಿತ್ತು. ಅಲ್ಲದೇ ದಾಬೋಲ್ಕರ್, ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಅಧಿಕಾರಿಗಳಿಂದಲೂ ಈ ಹೆಸರು ಕೇಳಿ ಬಂದಿತ್ತು ಎಂದು ತಿಳಿಸಿದ್ದಾರೆ. ಇದೀಗ ಆತನನ್ನು ಬಂಧನಕ್ಕೊಳಪಡಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ 12 ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದ್ದು, ಈ ಎಲ್ಲಾ ಮಾಹಿತಿಗಳನ್ನು ಸಂಬಂಧಪಟ್ಟ ಸಂಸ್ಥೆಗಳೊಂದಿಗೆ ತನಿಖಾಧಿಕಾರಿಗಳು ಹಂಚಿಕೊಂಡಿದ್ದಾರೆ. ಅಲ್ಲದೇ ಡಾ. ಎಂ.ಎಂ. ಕಲಬುರಗಿ ಹಾಗೂ ಗೋವಿಂದ ಪನ್ಸಾರೆ ಹತ್ಯೆ ಕುರಿತಂತೆಯೂ ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...