alex Certify
ಕನ್ನಡ ದುನಿಯಾ       Mobile App
       

Kannada Duniya

ನಕ್ಸಲರಿಗಾಗಿ ಮುಂದುವರೆದ ಶೋಧ ಕಾರ್ಯಾಚರಣೆ

ಕೊಡಗು: ಕೊಡಗು ಜಿಲ್ಲೆಯಲ್ಲಿ 20 ದಿನಗಳಲ್ಲಿ 2 ಬಾರಿ ನಕ್ಸಲರು ಕಾಣಿಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ನಕ್ಸಲ್ ನಿಗ್ರಹ ಪಡೆಯಿಂದ ನಾಪೊಕ್ಲು, ಕುಂಜಿಲ, ಕಕ್ಕಬ್ಬೆ ಮೊದಲಾದ ಪ್ರದೇಶಗಳಲ್ಲಿ ಕೂಂಬಿಂಗ್ ನಡೆಸಲಾಗಿದೆ.

ಶಸ್ತ್ರಸಜ್ಜಿತರಾಗಿದ್ದ ಮೂವರು ನಕ್ಸಲರು ನಾಲಡಿಯ ಬಲ್ಲಚಂಡ ಮುತ್ತಣ್ಣ ಅವರಿಗೆ ಸೇರಿದ ಲೈನ್ ಮನೆಗೆ ಬಂದಿದ್ದು, ಮೇಸ್ತ್ರಿ ಪೆಮ್ಮಯ್ಯ ಅವರಿಂದ ಅಡುಗೆ ಸಾಮಗ್ರಿ ಪಡೆದುಕೊಂಡು ತೆರಳಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ನಕ್ಸಲ್ ನಿಗ್ರಹಪಡೆಯ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ. ವಿಕ್ರಂ ಗೌಡ ನೇತೃತ್ವದ ತಂಡ ಈ ಭಾಗದಲ್ಲಿ ಚಟುವಟಿಕೆಯಲ್ಲಿ ತೊಡಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...