alex Certify
ಕನ್ನಡ ದುನಿಯಾ       Mobile App
       

Kannada Duniya

‘ನೀರ್ ದೋಸೆ’ ಚಿತ್ರದ ನಿರ್ಮಾಪಕ ಅರೆಸ್ಟ್

ಬೆಂಗಳೂರು: ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡದ ನೀರ್ ದೋಸೆ, ಬ್ಯೂಟಿಫುಲ್ ಮನಸುಗಳು ಚಿತ್ರದ ನಿರ್ಮಾಪಕ ಆರ್. ಪ್ರಸನ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನಿರ್ಮಾಪಕ ಪ್ರಸನ್ನ, 2015 ರಲ್ಲಿ ಮನೆಯ ಭೂ ದಾಖಲೆಯನ್ನು ಕಲರ್ ಜೆರಾಕ್ಸ್ ಮಾಡಿಸಿ ಸಿಂಡಿಕೇಟ್ ಬ್ಯಾಂಕ್ ಸೇರಿದಂತೆ ಮೂರು ಕಡೆ ಸಾಲ ಪಡೆದಿದ್ದರು. ಶೇಷಾದ್ರಿಪುರಂನ ಸಿಂಡಿಕೇಟ್ ಬ್ಯಾಂಕ್, ಕಿಲಾರಿ ರಸ್ತೆಯ ದೈವಜ್ಞ ಕೋ ಆಪರೇಟಿವ್ ಸೊಸೈಟಿ ಹಾಗು ಮಾರ್ಗದರ್ಶಿ ಚಿಟ್ಸ್ ನಲ್ಲಿ ಒಂದೇ ಆಸ್ತಿ ಪತ್ರ ನೀಡಿ ಒಂದೇ ವಾರದಲ್ಲಿ ಒಂದು ಕೋಟಿ ಸಾಲ ಪಡೆದಿದ್ದರು. ಬ್ಯಾಂಕಿನವರು ಆಸ್ತಿ ಪತ್ರ ಪರಿಶೀಲನೆ ನಡೆಸಿದಾಗ ಕಲರ್ ಜೆರಾಕ್ಸ್ ಕೊಟ್ಟಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದಾಗ ಪ್ರಸನ್ನ ಎರಡು ಕಂತುಗಳಲ್ಲಿ 17 ಲಕ್ಷ ರೂ. ಹಣ ವಾಪಸ್ ಮಾಡಿ, ಉಳಿದ 17 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಪ್ರಸನ್ನ ನೀಡಿದ ಚೆಕ್ ಬೌನ್ಸ್ ಆಗಿತ್ತು.

ಈ ಹಿನ್ನಲೆಯಲ್ಲಿ ಬ್ಯಾಂಕ್ ಮ್ಯಾನೇಜರ್, ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ವಂಚನೆ ಆರೋಪದಡಿ ದೂರು ದಾಖಲಿಸಿದ್ದರು. ಈ ನಿಟ್ಟಿನಲ್ಲಿ ನಿರ್ಮಾಪಕ ಪ್ರಸನ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...