alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಸರಣಿ ಅಪಘಾತಕ್ಕೆ ಮೂವರು ಬಲಿ

ಬೆಂಗಳೂರು: ನೆಲಮಂಗಲದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಲಾರಿ, ಬಸ್ ಹಾಗೂ ಜೀಪ್ ನಡುವೆ ಸರಣಿ ಅಪಘಾತವಾಗಿದ್ದು, ಜೀಪ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡು ಜೀಪ್ ನಲ್ಲಿ ಸಿಲುಕಿದವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ನಡೆಸಿದ್ದಾರೆ.

ಅಪಘಾತದ ತೀವ್ರತೆಗೆ ವಾಹನಗಳು ನಜ್ಜುಗುಜ್ಜಾಗಿವೆ. ಅಪಘಾತದಿಂದಾಗಿ ಬೆಂಗಳೂರು –ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...