alex Certify
ಕನ್ನಡ ದುನಿಯಾ       Mobile App
       

Kannada Duniya

ಫ್ಲೈಓವರ್ ನಿಂದ 30 ಅಡಿ ಕೆಳಕ್ಕೆ ಬಿದ್ದ ಟೆಂಪೋ

ಬೆಂಗಳೂರು: ಟೊಮೆಟೊ ಸಾಗಿಸುತ್ತಿದ್ದ ಟೆಂಪೋ 30 ಅಡಿ ಎತ್ತರದ ಫ್ಲೈ ಓವರ್ ನಿಂದ ಕೆಳಗೆ ಬಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 4 ರ ಫ್ಲೈಓವರ್ ಮೇಲೆ ಸಾಗುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ, 30 ಅಡಿ ಕೆಳಕ್ಕೆ ಬಿದ್ದಿದೆ. ಇದರಿಂದಾಗಿ ಟೆಂಪೋದಲ್ಲಿದ್ದ ಟೊಮೆಟೊ ರಸ್ತೆ ಪಾಲಾಗಿ, ಟ್ರಾಫಿಕ್ ಜಾಮ್ ಆಗಿದೆ.

ಸ್ಥಳಕ್ಕೆ ನೆಲಮಂಗಲ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡಿರುವ ನಾಲ್ವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸಲು ಕಾರ್ಯಾಚರಣೆ ನಡೆಸಲಾಗಿದೆ. ಯಶವಂತಪುರ ಮಾರುಕಟ್ಟೆಗೆ ಟೊಮೆಟೊ ಸಾಗಿಸಲಾಗುತ್ತಿತ್ತು. ಅಪಘಾತದಿಂದಾಗಿ ಎಲ್ಲ ಟೊಮೆಟೊ ರಸ್ತೆ ಪಾಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...