alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಬ್ರೇಕ್ ಫೇಲ್ ಆಗಿ ದುರಂತ

nelamangal

ಬೆಂಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ಪೆಟ್ಟಿಗೆ ಅಂಗಡಿಗೆ ನುಗ್ಗಿದ ಘಟನೆ ನೆಲಮಂಗಲದ ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯಲ್ಲಿ ಅಂಗಡಿ ಮಾಲೀಕ ಅಡವೀಶಯ್ಯ(45) ಮೃತಪಟ್ಟಿದ್ದಾರೆ. ರಸ್ತೆ ಬದಿಯ ಅಂಗಡಿಯಲ್ಲಿ ಅವರು ಕುಳಿತಿದ್ದ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನುಗ್ಗಿದೆ. ಅಡವೀಶಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ದಾಬಸ್ ಪೇಟೆಯಿಂದ ದೊಡ್ಡಬಳ್ಳಾಪುರಕ್ಕೆ ಹೊರಟಿದ್ದ ಬಸ್ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿ ಹೊಡೆದು, ಅಂಗಡಿಗೆ ನುಗ್ಗಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...