alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಮಳೆಗೆ ನೆಲಮಂಗಲ ಜಲಾವೃತ

ಬೆಂಗಳೂರು: ಭಾರೀ ಮಳೆಯಾದ ಕಾರಣ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಹಲವು ಬಡಾವಣೆಗಳು ಜಲಾವೃತಗೊಂಡಿವೆ.

ರಾತ್ರಿ ಸುರಿದ ಧಾರಾಕಾರ ಮಳೆಗೆ ಅಮಾನಿ ಕೆರೆ ತುಂಬಿ ಹರಿದಿದ್ದು, ಗಜಾರಿಯಾ ಲೇಔಟ್, ಭೈರವೇಶ್ವರ ನಗರ, ಜ್ಯೋತಿ ನಗರ ಸೇರಿದಂತೆ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ.

ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಹಲವು ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿದ್ದ ದವಸ, ಧಾನ್ಯ, ವಸ್ತುಗಳೆಲ್ಲಾ ನೀರಿಗೆ ಹಾಳಾಗಿವೆ. ಕೆಲವು ಮನೆಗಳಲ್ಲಿ ಮೊಣಕಾಲಿನವರೆಗೂ ನೀರು ಬಂದಿದ್ದು, ನೀರು ಹೊರಹಾಕಲು ನಿವಾಸಿಗಳು ಹರಸಾಹಸ ಪಡುವಂತಾಗಿದೆ.

ಬೆಳಗಿನ ಜಾವ ಕೆರೆ ಕೋಡಿ ತುಂಬಿ ಹರಿದು ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ರಾಷ್ಟ್ರೀಯ ಹೆದ್ದಾರಿ, ಸರ್ವೀಸ್ ರಸ್ತೆಯಲ್ಲೂ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...