alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿಯ ಬೆತ್ತಲೆ ವಿಡಿಯೋ ಮಾಡಿ ನಿರಂತರ ಅತ್ಯಾಚಾರ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಯುವಕ, ತನ್ನ ಕೃತ್ಯದ ದೃಶ್ಯಗಳನ್ನು ಸೆರೆ ಹಿಡಿದು ನಿರಂತರವಾಗಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಡೆದಿದೆ.

ಮಾಗಡಿ ತಾಲ್ಲೂಕು ಕಣನೂರು ನಿವಾಸಿಯಾಗಿರುವ ಯುವಕ ನೆಲಮಂಗಲ ಸಮೀಪದ ಹೆಗ್ಗಡದೇವನಪುರದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಈಗಾಗಲೇ ಆತನಿಗೆ ಮದುವೆಯಾಗಿದ್ದು, ಯುವತಿ ಕಣನೂರಿನಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ.

ದೃಶ್ಯಗಳನ್ನು ಸೆರೆ ಹಿಡಿದುಕೊಂಡಿದ್ದ ಆತ, ಯುವತಿಯನ್ನು ಬೆದರಿಸಿ ಹಲವು ಸಲ ಅತ್ಯಾಚಾರ ಎಸಗಿದ್ದು, ಇದರಿಂದ ಯುವತಿ 2 ಬಾರಿ ಗರ್ಭಿಣಿಯಾಗಿದ್ದರಿಂದ ಗರ್ಭಪಾತ ಮಾಡಿಸಿದ್ದಾನೆ. ಯುವತಿ ಮದುವೆಯಾಗುವಂತೆ ಒತ್ತಾಯಿಸಿದಾಗ, ಕೈಕೊಟ್ಟು ಪರಾರಿಯಾಗಿದ್ದಾನೆ.

ನೊಂದ ಯುವತಿ ಮಾದನಾಯನಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...