alex Certify
ಕನ್ನಡ ದುನಿಯಾ       Mobile App
       

Kannada Duniya

ಕೊನೆಗೂ ಸಚಿವರ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

ಪ್ರಮುಖ ಖಾತೆಗಳಿಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ಹಗ್ಗಜಗ್ಗಾಟ ಕೊನೆಗೊಂಡಿದ್ದು, ನೂತನ ಸಚಿವರ ಪ್ರಮಾಣ ವಚನಕ್ಕೆ ಈಗ ಕಾಲ ಕೂಡಿಬಂದಿದೆ.

ಭಾನುವಾರದಂದು ನೂತನ ಸಚಿವರುಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ಹೇಳಲಾಗಿದ್ದು, ರಾಜ್ಯಪಾಲರರೊಂದಿಗೆ ಚರ್ಚಿಸಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಮಯ ನಿಗದಿಪಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಇಂದು ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯ್ ವಾಲಾರನ್ನು ಭೇಟಿಯಾಗಲಿದ್ದಾರೆ.

ಭಾನುವಾರ ನಡೆಯಲಿರುವ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜೆಡಿಎಸ್-ಕಾಂಗ್ರೆಸ್ ನ ಹಿರಿಯ ಶಾಸಕರೊಂದಿಗೆ ಕೆಲ ಹೊಸ ಮುಖಗಳಿಗೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...