alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರವಾಸಿ ತಾಣಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್…!

ಮೈಸೂರು: ಭದ್ರತೆ ಹಾಗೂ ಅನೈತಿಕ ಚಟುವಟಿಕೆ ನಿಯಂತ್ರಿಸುವ ಉದ್ದೇಶದಿಂದ ಪ್ರವಾಸಿ ತಾಣಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ.

ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿ ತಾಣಗಳಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹೊಸ ವರ್ಷಾಚರಣೆ ಸಂಭ್ರಮಿಸಲು ಬರುತ್ತಾರೆ. ಈ ಬಾರಿ ಭದ್ರತೆ ಹಾಗೂ ಅನೈತಿಕ ಚಟುವಟಿಕೆ ನಿಯಂತ್ರಿಸಲು ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ.

ಮೈಸೂರು ಚಾಮುಂಡಿ ಬೆಟ್ಟಕ್ಕೆ ಡಿಸೆಂಬರ್ 31 ರಂದು ರಾತ್ರಿ 9 ಗಂಟೆಯಿಂದ ಜನವರಿ 1 ರ ಬೆಳಗಿನ ವರೆಗೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಅದೇ ರೀತಿ ಚಾಮರಾಜನಗರ ಜಿಲ್ಲೆಯ ಕಾಡುಗಳಲ್ಲಿ ನಡೆಯುವ ಹೊಸ ವರ್ಷಾಚರಣೆಗಳಿಗೆ ನಿರ್ಬಂಧ ಹೇರಲಾಗಿದೆ. ಹೊಸ ವರ್ಷಾಚರಣೆಯ ನೆಪದಲ್ಲಿ ಪಟಾಕಿ ಸಿಡಿಸುವುದು, ಭಾರೀ ಶಬ್ದದೊಂದಿಗೆ ಸಂಗೀತ ಕಾರ್ಯಕ್ರಮ ಏರ್ಪಡಿಸಲು ಅವಕಾಶ ಇರುವುದಿಲ್ಲ. ವನ್ಯಜೀವಿಗಳಿಗೆ ತೊಂದರೆಯಾಗಲಿರುವ ಹಿನ್ನಲೆಯಲ್ಲಿ ಅನೇಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.

ತಲಕಾವೇರಿ, ಅಬ್ಬಿ ಫಾಲ್ಸ್, ದುಬಾರೆ ಮೊದಲಾದ ಸ್ಥಳಗಳಿಗೆ ಸಂಜೆ 6 ಗಂಟೆ ಬಳಿಕ ಪ್ರವಾಸಿಗರು ತೆರಳುವಂತಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...