alex Certify
ಕನ್ನಡ ದುನಿಯಾ       Mobile App
       

Kannada Duniya

ಎಚ್ಚರ…! ಕರ್ನಾಟಕದಲ್ಲೂ ಕಾಣಿಸಿಕೊಂಡ್ತು ನಿಫಾ ವೈರಸ್

ಕೇರಳದ ಕೋಝಿಕೋಡ್ ಹಾಗೂ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ನಿಫಾ ವೈರಸ್ ಗೆ 11 ಮಂದಿ ಬಲಿಯಾಗಿದ್ದಾರೆ. 9 ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಗಂಭೀರವಾಗಿದೆ. ಇನ್ನೂ ಇಬ್ಬರು ಸಾವನ್ನಪ್ಪಿರುವ ವರದಿಯಾಗಿದೆ. ಆದ್ರೆ ಅವ್ರ ಸಾವಿಗೆ ನಿಫಾ ವೈರಸ್ ಕಾರಣವಾ ಎಂಬುದು ತಿಳಿದು ಬಂದಿಲ್ಲ.

ನಿಫಾ ವೈರಸ್ ವಿರುದ್ಧ ಯಾವ ಕ್ರಮಕೈಗೊಳ್ಳಬೇಕೆಂಬುದು ನಮಗೆ ತಿಳಿಯುತ್ತಿಲ್ಲ. ಇದು ರಾಜ್ಯದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದೆ. ಈ ಬಗ್ಗೆ ವೈದ್ಯರಿಗೆ ಯಾವುದೇ ಅನುಭವವಿಲ್ಲ. ವಿಶ್ವ ಆರೋಗ್ಯ ಸಂಸ್ಥೆಗೆ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿದೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಕೇರಳದ ಆರೋಗ್ಯ ಸಚಿವರು ಹೇಳಿದ್ದಾರೆ.

ಹಣ್ಣಿನಲ್ಲಿ ಕಾಣಿಸಿಕೊಳ್ಳುವ ಈ ವೈರಸ್ ಗೆ ಈವರೆಗೂ ಯಾವುದೇ ಮದ್ದು ಕಂಡು ಹಿಡಿದಿಲ್ಲವೆಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಸೋಂಕು ತಗುಲಿದ 116 ಜನರನ್ನು ಪ್ರತ್ಯೇಕವಾಗಿಡಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ. 94 ಜನರಿಗೆ ಮನೆಯಿಂದ ಹೊರ ಬರದಂತೆ ಸೂಚನೆ ನೀಡಲಾಗಿದೆ. 22 ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ.

ಈ ಮಧ್ಯೆ ನಿಫಾ ವೈರಸ್ ಕರ್ನಾಟಕ್ಕೂ ಪ್ರವೇಶ ಮಾಡಿದೆ. ದಕ್ಷಿಣ ಕನ್ನಡದಲ್ಲಿ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇವರೆಲ್ಲ ಕೇರಳದವರಾಗಿದ್ದು ಒಬ್ಬ, ನಿಫಾ ವೈರಸ್ ಕಾಣಿಸಿಕೊಂಡಿದ್ದ ರೋಗಿಯನ್ನು ಭೇಟಿಯಾಗಿ ಬಂದಿದ್ದ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...