alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗ ಜಿಲ್ಲೆಗೂ ಕಾಲಿಟ್ಟಿದೆಯಾ…? ನಿಫಾ ವೈರಸ್

ಶಿವಮೊಗ್ಗ : ಎಲ್ಲೆಡೆ ಭೀತಿ ಹುಟ್ಟಿಸಿರುವ ನಿಫಾ ವೈರಸ್ ಜಿಲ್ಲೆಗೂ ಕಾಲಿಟ್ಟಿದೆ. ಸಾಗರದ ಯುವಕನೊಬ್ಬನಲ್ಲಿ ಶಂಕಿತ ಸೊಂಕು ತಗುಲಿರುವ ಅನುಮಾನ ವ್ಯಕ್ತವಾಗಿದ್ದು, ರಕ್ತದ ಮಾದರಿಯನ್ನು ಇದೀಗ ಪೂನಾದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಸಾಗರದ ಮಿಥುನ್ (28)ಗೆ ನಿಫಾ ಸೋಂಕು ತಗುಲಿರುವ ಶಂಕೆ ಇದೆ. ಈತ ಕೇರಳ ರಾಜ್ಯದ ಕಾಸರಗೋಡಿನಲ್ಲಿ ಉದ್ಯೋಗದಲ್ಲಿದ್ದರು. ಇವರು ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಸಾಗರದಲ್ಲಿರುವ ತಮ್ಮ ಮನೆಗೆ ಮರಳಿದ್ದರು.

ಜ್ವರ ತೀವ್ರವಾದ ಹಿನ್ನೆಲೆಯಲ್ಲಿ ಸಾಗರದ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಫಾ ವೈರಸ್ ಶಂಕೆ ಹಿನ್ನೆಲೆಯಲ್ಲಿ ವೈದ್ಯರು ಮಿಥುನ್ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪೂನಾದಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪ್ರಯೋಗಾಲಯದಿಂದ ಇನ್ನು ಮೂರು ದಿನಗಳಲ್ಲಿ ವರದಿ ಬರುವ ಸಾಧ್ಯತೆ ಇದ್ದು, ನಂತರವಷ್ಟೆ ಸೋಂಕು ತಗುಲಿದೆಯೇ ಎಂಬುದು ದೃಢಪಡಲಿದೆ.

ಇದೀಗ ಮಿಥುನ್ ಗೆ ಸಾಗರದ ತಾಲ್ಲೂಕು ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ನಿಫಾ ವೈರಸ್ ಮಾಹಿತಿ ದೊರಕುತ್ತಿದ್ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...