alex Certify
ಕನ್ನಡ ದುನಿಯಾ       Mobile App
       

Kannada Duniya

ಲ್ಯಾಬ್ ವರದಿ ಬಳಿಕ ದೂರವಾಯ್ತು ಆತಂಕ

ಶಿವಮೊಗ್ಗ ಜಿಲ್ಲೆಯಲ್ಲಿ ವರದಿಯಾಗಿದ್ದ ಶಂಕಿತ ನಿಫಾ ಪ್ರಕರಣ ಪುಣೆಯಲ್ಲಿನ ಲ್ಯಾಬ್ ಟೆಸ್ಟ್ ರಿಪೋರ್ಟ್ ನಲ್ಲಿ ನೆಗೆಟಿವ್ ಎಂದು ಬಂದಿದ್ದು, ಜಿಲ್ಲೆಯ ಜನರಲ್ಲಿ ಹಾಗೂ ಯುವಕನ ಕುಟುಂಬದಲ್ಲಿ ಆವರಿಸಿದ್ದ ಆತಂಕ ದೂರವಾಗಿದೆ.

ಸಾಗರ ತಾಲ್ಲೂಕು ಶಿರವಂತೆ ಗ್ರಾಮದ ಯುವಕ ಮಿಥುನ್ (20) ತೀವ್ರ ಜ್ವರದಿಂದ ಬಳಲುತ್ತಿದ್ದರು. ಇವರನ್ನು ಸಾಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಕೇರಳ ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ನಿಫಾ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಮಿಥುನ್ ಕೆಲ ದಿನಗಳ ಹಿಂದೆ ಕೇರಳದ ಕಾಸರಗೋಡಿನಲ್ಲಿ ಉದ್ಯೋಗದಲ್ಲಿದ್ದರು. ತೀವ್ರ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ತಮ್ಮ ಊರು ಸಾಗರಕ್ಕೆ ಮರಳಿದ್ದರು.

ನಿಫಾ ವೈರಸ್ ಹರಡಿರುವ ಶಂಕೆ ಹಿನ್ನೆಲೆಯಲ್ಲಿ ಮಿಥುನ್ ರಕ್ತದ ಮಾದರಿ ಸಂಗ್ರಹಿಸಿ ಪುಣೆಯಲ್ಲಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ವರದಿ ಬಂದಿದ್ದು, ನೆಗೆಟಿವ್ ಎಂದು ತಿಳಿದುಬಂದಿದೆ. ಇದರಿಂದಾಗಿ ಆವರಿಸಿದ್ದ ಆತಂಕ ದೂರವಾದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...