alex Certify
ಕನ್ನಡ ದುನಿಯಾ       Mobile App
       

Kannada Duniya

ನಿಫಾ ವೈರಸ್ ಭೀತಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮ

ದಕ್ಷಿಣ ಕನ್ನಡ : ನೆರೆರಾಜ್ಯ ಕೇರಳದಲ್ಲಿ ಹೆಚ್ಚುತ್ತಿರುವ ನಿಫಾ ವೈರಸ್ ಜ್ವರ (ಬಾವಲಿ ಜ್ವರ) ವನ್ನು ಜಿಲ್ಲೆಯಲ್ಲಿ ತಡೆಯಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಯಾವುದೇ ಪ್ರಕರಣ ವರದಿಯಾಗಿಲ್ಲವಾದರೂ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಗಾಧಿಕಾರಿ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಕೇರಳದಲ್ಲಿ ತನ್ನ ಆರ್ಭಟದಿಂದ ಆತಂಕ ಸೃಷ್ಟಿಸಿರುವ ನಿಫಾ ವೈರಸ್ 12ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. ಹಾಗೂ ಇದರಿಂದ ಬಳಲುತ್ತಿರುವವರ ಸಂಖ್ಯೆ 25 ಮೀರಿದ್ದು, ಇವರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ 2001 ನೇ ಇಸವಿಯಲ್ಲಿ ಕಾಣಿಸಿಕೊಂಡ ಈ ವೈರಸ್ 66 ಮಂದಿಗೆ ಸೋಂಕು ತಗಲಿ ಇದರಲ್ಲಿ 45 ಮಂದಿ ಸಾವನ್ನಪ್ಪಿದ್ದರು. ಈ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕೆಂದು ಇಂದು ನಡೆದ ಜಿಲ್ಲಾ ವೈದ್ಯಾಧಿಕಾರಿಗಳ ಹಾಗೂ ಇತರ ಅಧಿಕಾರಿಗಳ ಸಭೆಯಲ್ಲಿ ತಿಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...