alex Certify
ಕನ್ನಡ ದುನಿಯಾ       Mobile App
       

Kannada Duniya

ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ಬೆಳಗಾವಿ: ‘ನೋ ಹೆಲ್ಮೆಟ್, ನೋ ಪೆಟ್ರೋಲ್’ ಅಭಿಯಾನವನ್ನು ಅನೇಕ ಕಡೆಗಳಲ್ಲಿ ಜಾರಿಗೆ ತರಲು ಈಗಾಗಲೇ ಪ್ಲಾನ್ ಮಾಡಲಾಗಿದೆ. ಬೆಳಗಾವಿಯಲ್ಲಿ ಇಂದಿನಿಂದಲೇ ಹೆಲ್ಮೆಟ್ ಇಲ್ಲದ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಹಾಕದಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಹೆಲ್ಮೆಟ್ ಕಡ್ಡಾಯ ಮಾಡಿದ್ದರೂ, ಹೆಚ್ಚಿನ ಸಂಖ್ಯೆಯ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಬಳಸುತ್ತಿಲ್ಲ. ಹೆಲ್ಮೆಟ್ ಬಳಸುವಂತೆ ಜಾಗೃತಿ ಮೂಡಿಸಿದ್ದ ಪೊಲೀಸರು, ಇದರ ಮುಂದಿನ ಹಂತವಾಗಿ ನೋ ಹೆಲ್ಮೆಟ್ ನೋ ಪೆಟ್ರೋಲ್ ಅಭಿಯಾನ ಆರಂಭಿಸಲಿದ್ದಾರೆ.

ಪೆಟ್ರೋಲ್ ವಿತರಕರೊಂದಿಗೆ ಸಭೆ ನಡೆಸಿದ ಪೊಲೀಸ್ ಆಯುಕ್ತರು, ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ಪೆಟ್ರೋಲ್ ಹಾಕದಂತೆ ತಿಳಿಸಿದ್ದು, ಇದಕ್ಕೆ ವಿತರಕರು ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಇಂದಿನಿಂದಲೇ ಬೆಳಗಾವಿಯಲ್ಲಿ ಹೆಲ್ಮೆಟ್ ಇಲ್ಲದ ವಾಹನ ಸವಾರರಿಗೆ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಹಾಕುವುದಿಲ್ಲ. ಈ ಕುರಿತು ಮಾಹಿತಿ ಫಲಕಗಳನ್ನು ಹಾಕುವ ಜೊತೆಗೆ ಪ್ರತಿ ಬಂಕ್ ನಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...