alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರ ಕರ್ನಾಟಕದತ್ತ ರಾಜಕೀಯ ನಾಯಕರ ಚಿತ್ತ

ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ನಡೆಸಿದ್ದು, ಗೆಲುವಿಗೆ ಕಾರ್ಯತಂತ್ರ ರೂಪಿಸಿವೆ. ಕಾಂಗ್ರೆಸ್, ಜೆ.ಡಿ.ಎಸ್., ಬಿ.ಜೆ.ಪಿ.ಯ ಪ್ರಮುಖ ನಾಯಕರು ಈ ಬಾರಿ ಕ್ಷೇತ್ರವನ್ನು ಬದಲಿಸಲಿದ್ದು, ಉತ್ತರ ಕರ್ನಾಟಕದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ.

ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಈ ಹಿಂದೆಯೇ ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದು, ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.

ಕುಮಾರಸ್ವಾಮಿ ರಾಮನಗರದ ಬದಲಿಗೆ ಉತ್ತರ ಕರ್ನಾಟಕದ ಕ್ಷೇತ್ರವೊಂದರಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ವರುಣಾ ಇಲ್ಲವೇ ಚಾಮುಂಡೇಶ್ವರಿ ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಸ್ಪರ್ಧಿಸುವಂತೆ ಅವರಿಗೆ ಒತ್ತಡ ಹಾಕಲಾಗಿದೆ.

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಮುಂದಿನ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ. ಉತ್ತರ ಕರ್ನಾಟಕದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತರನ್ನು ಸೆಳೆಯಲು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಕಣಕ್ಕಿಳಿಸಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ.

ಯಡಿಯೂರಪ್ಪ ಅವರಿಗೆ ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರಿಂದ ಒತ್ತಡವಿದ್ದು, ಅವರು ಶಿಕಾರಿಪುರ ಬಿಟ್ಟು ವಿಜಯಪುರ ಇಲ್ಲವೇ ಬಾಗಲಕೋಟೆ ಜಿಲ್ಲೆಯಿಂದ ಸ್ಪರ್ಧಿಸುವುದು ಖಚಿತವಾಗಿದೆ.

ಯಡಿಯೂರಪ್ಪ, ಸಿದ್ಧರಾಮಯ್ಯ ಮತ್ತು ಕುಮಾರಸ್ವಾಮಿ ಅವರು ಉತ್ತರ ಕರ್ನಾಟದ ಮೇಲೆ ಕಣ್ಣಿಟ್ಟಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಈ ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ಪ್ಲಾನ್ ಮಾಡಿದ್ದಾರೆ.

ಇದಕ್ಕೆ ಪೂರಕವಾಗಿ ಮೂರೂ ರಾಜಕೀಯ ಪಕ್ಷಗಳಲ್ಲಿ ಚರ್ಚೆ, ಸಮಾಲೋಚನೆಗಳು ನಡೆದಿವೆ. ಉತ್ತರ ಕರ್ನಾಟಕ ಚುನಾವಣೆ ಅಖಾಡ ಈ ಬಾರಿ ಇನ್ನಷ್ಟು ರಂಗೇರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...