alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆಯ ಆರ್ಭಟ: ಸಿಡಿಲು ಬಡಿದು ಓರ್ವ ಸಾವು

rain-sidilu

ಹುಬ್ಬಳ್ಳಿ : ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆಯಾಗಿದ್ದು, ಅಪಾರ ಹಾನಿಯಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸಿಡಿಲಿಗೆ ಬಾಲಕನೊಬ್ಬ ಮೃತಪಟ್ಟಿದ್ದು, ಬೆಳಗಾವಿಯಲ್ಲಿ ಸಿಡಿಲು ಬಡಿದು ಐವರು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ ಅಂಚಿಟಗೇರಿಯಲ್ಲಿ ಮರ ಬಿದ್ದು, ಮನೆಯೊಳಗೆ ಅಪಾಯಕ್ಕೆ ಸಿಲುಕಿದ್ದ ಐವರನ್ನು ರಕ್ಷಿಸಲಾಗಿದೆ.

ವಿಜಯಪುರ ಜಿಲ್ಲೆ ತಿಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಕನಮಡಿ ಗ್ರಾಮದಲ್ಲಿ ಸಿಡಿಲು ಬಡಿದು ಮೊಸೀನ್ ತೋಟದ್ ಎಂಬ ಬಾಲಕ ಸಾವನ್ನಪ್ಪಿದ್ದಾನೆ.

ಹುಬ್ಬಳ್ಳಿಯಲ್ಲಿ ಮರ ಬಿದ್ದು ಮನೆ ಕುಸಿದಿದೆ. ಈ ಮನೆಯೊಳಗೆ ಇದ್ದ ದೀಪಕ್, ಅಭಿಷೇಕ್ ಸೇರಿದಂತೆ ನಾಲ್ವರು ಬಾಲಕರನ್ನು ರಕ್ಷಿಸಲಾಗಿದೆ. ಮರ ಬಿದ್ದು ಗರ್ಭಿಣಿಯೊಬ್ಬರು ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ತುಮ್ಮರಗಡ್ಡಿಯಲ್ಲಿ ಸಿಡಿಲು ಬಡಿದು ಶಾಂತವ್ವ, ಮಾದೇವಿ, ಕಲ್ಮೇಶ್ ಸೇರಿದಂತೆ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ನೇಸರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಗರ್ತಿ ಗ್ರಾಮದಲ್ಲಿ ಸಿಡಿಲು ಬಡಿದು, ಯಲ್ಲಪ್ಪ ಎಂಬುವವರಿಗೆ ಸೇರಿದ 35 ಮೇಕೆಗಳು ಮೃತಪಟ್ಟಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...