alex Certify
ಕನ್ನಡ ದುನಿಯಾ       Mobile App
       

Kannada Duniya

NPS ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ನೂತನ ಪಿಂಚಣಿ ಯೋಜನೆ(NPS) ನೌಕರರ ಹಿತ ಕಾಯಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಎನ್.ಪಿ.ಎಸ್. ನೌಕರರ ಕುರಿತಾಗಿ ಸದಸ್ಯರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಪರವಾಗಿ ಉತ್ತರಿಸಿದ ಅವರು, ಎನ್.ಪಿ.ಎಸ್. ನೌಕರರ ಹಿತಾಸಕ್ತಿಯನ್ನು ರಕ್ಷಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. 2006 ರಿಂದ ನೂತನ ಪಿಂಚಣಿ ಯೋಜನೆ ಜಾರಿಯಲ್ಲಿದ್ದು, ಅದರಲ್ಲಿ ಯಾವುದೇ ಲೋಪಗಳಿದ್ದಲ್ಲಿ ಸರಿಪಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

2006 ರಿಂದ ದೇಶದಲ್ಲಿ ಯೋಜನೆ ಜಾರಿಯಾಗಿದೆ. ರಾಜ್ಯದಲ್ಲಿ ಎನ್.ಪಿ.ಎಸ್. ನೌಕರರನ್ನು ವಿಶ್ವಾಸಕ್ಕೆ ಪಡೆದು ಸಮಸ್ಯೆ ಬಗೆಹರಿಸಲಾಗುತ್ತದೆ. 1.97 ಲಕ್ಷ ನೌಕರರು ಯೋಜನೆಗೆ ಒಳಪಟ್ಟಿದ್ದಾರೆ. ಸರ್ಕಾರದ ಪಾಲಿನ ವಂತಿಗೆಯನ್ನು ಷೇರುಪೇಟೆಯಲ್ಲಿ ತೊಡಗಿಸಲಾಗಿದೆ. ನೌಕರರ ವಂತಿಗೆ ಬಗ್ಗೆ ತೊಂದರೆ ಆಗದಂತೆ ಎಚ್ಚರಿಕೆಯನ್ನು ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...