alex Certify
ಕನ್ನಡ ದುನಿಯಾ       Mobile App
       

Kannada Duniya

ಆರೋಪಿ ಮುಂದೆ ಯದ್ವಾತದ್ವಾ ಕುಣಿದಿದ್ದ ಪಿಎಸ್ಐ ಸಸ್ಪೆಂಡ್

ಠಾಣೆಯ ಸಿಬ್ಬಂದಿ ಹಾಗೂ ಆರೋಪಿ ಎದುರೇ ಯದ್ವಾತದ್ವಾ ಹೆಜ್ಜೆ ಹಾಕುತ್ತಾ, ಆರೋಪಿ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದ ಕೋಲಾರ ಜಿಲ್ಲೆ ಬೇತಮಂಗಲ ಠಾಣೆ ಸಬ್ ಇನ್ಸ್ ಪೆಕ್ಟರ್ ಹೊನ್ನೇಗೌಡರನ್ನು, ಜಿಲ್ಲಾ ರಕ್ಷಣಾಧಿಕಾರಿ ಲೋಕೇಶ್ ಕುಮಾರ್ ಅಮಾನತುಗೊಳಿಸಿದ್ದಾರೆ.

ಹೊನ್ನೇಗೌಡ, ಠಾಣೆಗೆ ಕರೆತಂದಿದ್ದ ಆರೋಪಿ ಮುಂದೆ ತನ್ನ ಮೊಬೈಲ್ ನಲ್ಲಿ ಹಾಕಿದ್ದ ಹಾಡಿಗೆ ಸ್ಟೆಪ್ ಹಾಕಿದ್ದರು. ಅಷ್ಟೇ ಅಲ್ಲದೆ ಆರೋಪಿಗೂ ಕುಣಿಯುವಂತೆ ಒತ್ತಾಯಿಸಿ, ಆತನಿಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದರು.

ಇದನ್ನು ಠಾಣೆಯ ಸಿಬ್ಬಂದಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವೈರಲ್ ಆಗಿತ್ತು. ಈ ವಿಡಿಯೋ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಕುಮಾರ್ ಅವರ ಗಮನಕ್ಕೆ ಬರುತ್ತಿದ್ದಂತೆಯೇ ಹೊನ್ನೇಗೌಡರನ್ನು ಅಮಾನತುಗೊಳಿಸಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಡಿವೈಎಸ್ಪಿಯವರಿಗೆ ಆದೇಶಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...