alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸಂಪುಟ ರಚನೆಗೆ ಕೊನೆಗೂ ಕೂಡಿಬಂದ ಮುಹೂರ್ತ…?

ಖಾತೆ ಹಂಚಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಗೊಂಡಿದೆ ಎನ್ನಲಾಗಿದ್ದು, ಜೂನ್ 2 ರ ಶನಿವಾರದಂದು ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ.

ಸಚಿವ ಸಂಪುಟ ರಚನೆ ಶೀಘ್ರದಲ್ಲಿ ಆಗದಿದ್ದರೆ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗಲಿದೆ. ಇದರಿಂದ ಆಕ್ರೋಶಕ್ಕೆ ತುತ್ತಾಗಬೇಕಾಗುತ್ತದೆ ಎಂದು ಉಭಯ ಪಕ್ಷಗಳ ವರಿಷ್ಠರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಚಿವ ಸಂಪುಟ ರಚಿಸಲು ಮುಂದಾಗಲಾಗಿದೆ.

ಇದಕ್ಕಾಗಿ ಜೂನ್ ಎರಡರಂದು ಮುಹೂರ್ತ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಈಗಾಗಲೇ ತನ್ನ ಸಚಿವರ ಪಟ್ಟಿ ಸಿದ್ಧಪಡಿಸಿಕೊಂಡಿದ್ದರೆ, ಜೆಡಿಎಸ್ ನಾಯಕರು ಪಕ್ಷದ ವರಿಷ್ಠ ದೇವೇಗೌಡರ ನಿವಾಸದಲ್ಲಿ ಸಭೆ ಸೇರಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದರ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಎರಡು ಪಕ್ಷಗಳಲ್ಲೂ ಬಹಳಷ್ಟು ಮಂದಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು, ಸಂಪುಟ ರಚನೆಯ ಬಳಿಕ ಸ್ಥಾನ ವಂಚಿತರು ಏನು ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...