alex Certify
ಕನ್ನಡ ದುನಿಯಾ       Mobile App
       

Kannada Duniya

ಮೇ 25 ರಂದು ವಿಶ್ವಾಸಮತ ಯಾಚನೆಗೆ ನಿರ್ಧಾರ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ ಇಂದು ಅಧಿಕಾರಕ್ಕೆ ಬರುತ್ತಿದೆ.

ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಮಧ್ಯೆ ಬೆಂಗಳೂರಿನ ಹಿಲ್ಟನ್ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದ್ದು, ಮೇ 25 ರ ಶುಕ್ರವಾರದಂದು ವಿಶ್ವಾಸಮತ ಯಾಚನೆ ಮಾಡಲು ನಿರ್ಧರಿಸಲಾಗಿದೆ.

ಮೇ 24 ರಂದು ವಿಧಾನಸಭಾ ಸಭಾಪತಿಗಳ ಆಯ್ಕೆ ನಡೆಯಲಿದ್ದು, ಕಾಂಗ್ರೆಸ್ ನ ರಮೇಶ್ ಕುಮಾರ್ ನೂತನ ಸಭಾಪತಿಗಳಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಈ ಹಿನ್ನೆಲೆಯಲ್ಲಿ ಮೇ 25 ರಂದು ಮೈತ್ರಿಕೂಟದ ಸರ್ಕಾರ, ವಿಶ್ವಾಸಮತ ಯಾಚಿಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರು ಬಂದಿದ್ದು, ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...