alex Certify
ಕನ್ನಡ ದುನಿಯಾ       Mobile App
       

Kannada Duniya

ಫೆ.14 ರ ಪ್ರೇಮಿಗಳ ದಿನಕ್ಕೊಂದು ‘ಓಪನ್’ ಸುದ್ದಿ

valentine-day

ಫೆಬ್ರವರಿ 14ರಂದು ಪ್ರೇಮಿಗಳ ದಿನಾಚರಣೆಯನ್ನು ಭರ್ಜರಿಯಾಗಿ ಆಚರಿಸಲು ಈಗಿನಿಂದಲೇ ತಯಾರಿ ನಡೆಸುತ್ತಿರುವ ಪ್ರೇಮಿಗಳಿಗೊಂದು ಖುಷಿಯ ವಿಚಾರ ಇಲ್ಲಿದೆ ನೋಡಿ. ಬೆಂಗಳೂರಿನಲ್ಲಿ ಕೆಲವು ಸ್ಥಳಗಳಲ್ಲಿ ಪ್ರೇಮಿಗಳ ದಿನಾಚರಣೆ ದಿನದಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜಿಸಲಾಗುತ್ತಿದೆ.

ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಪ್ರೇಮಿಗಳ ದಿನಾಚರಣೆಯಂದು ಓಪನ್ ಸ್ಟ್ರೀಟ್ ಮಾಡಲಾಗುವುದು. ಅಂದು ಬೆಳಿಗ್ಗೆ 9 ರಿಂದ ರಾತ್ರಿ 9 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗುತ್ತಿದೆ. ಹೀಗಾಗಿ ಆ ದಿನದಂದು ಪ್ರೇಮಿಗಳಿಗಾಗಿಯೇ ಓಪನ್ ಸ್ಟ್ರೀಟ್ ಕಾರ್ಯಕ್ರಮದಲ್ಲಿ ಡ್ಯಾನ್ಸ್, ಹಾಡು, ಪೇಯಿಂಟಿಂಗ್ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎನ್ನಲಾಗಿದೆ. ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ನಿಂದ ಬ್ರಿಗೇಡ್ ರಸ್ತೆವರೆಗೆ ಹಾಗೂ ಎಂಜಿ ರೋಡ್ ನಲ್ಲಿ ಸಂಚಾರವನ್ನು ಇಡೀ ದಿನ ಬಂದ್ ಮಾಡಲಾಗುತ್ತಿರುವುದು ಇದಕ್ಕೆ ಪೂರಕವಾಗುತ್ತಿದೆ.

ಓಪನ್ ಸ್ಟ್ರೀಟ್ ಕಾರ್ಯಕ್ರಮದಲ್ಲಿ ಸೈಕಲ್ ಗಳಿಗೆ ಅವಕಾಶ ಇರುತ್ತದೆ. ಪ್ರತಿ ತಿಂಗಳ ಮೊದಲ ವಾರದಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು. ಹೂಡಿಕೆದಾರರ ಸಮಾವೇಶ ನಡೆಯುವ ಕಾರಣ ಅದನ್ನು ಫೆಬ್ರವರಿ 14ರಂದು ಮಾಡಲಾಗುವುದು. ಆಸಕ್ತರು ಫೆ. 4ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಪ್ರೇಮಿಗಳ ದಿನಾಚರಣೆಗೂ, ಓಪನ್ ಸ್ಟ್ರೀಟ್ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬೆಂಗಳೂರು ನಗರ ಸಾರಿಗೆ ಆಯುಕ್ತರು ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...