alex Certify
ಕನ್ನಡ ದುನಿಯಾ       Mobile App
       

Kannada Duniya

‘ಆಪರೇಷನ್ ಕಮಲ’ ಖೆಡ್ಡಾಗೆ ಬೀಳುತ್ತಾ ರಾಜ್ಯ ಸಮ್ಮಿಶ್ರ ಸರ್ಕಾರ…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೆಣೆದಿರುವ ರಣತಂತ್ರಕ್ಕೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದ್ದು, ಈ ನಿಟ್ಟಿನಲ್ಲಿ ಬಿಜೆಪಿಯ ಐವರು ನಾಯಕರಿಗೆ ಸರ್ಕಾರ ಉರುಳಿಸುವ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಇದೇ ಕಾರಣಕ್ಕಾಗಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ದೆಹಲಿಗೆ ತೆರಳಿದ್ದ ರಾಜ್ಯಾಧ್ಯಕ್ಷ  ಯಡಿಯೂರಪ್ಪನವರು, ಕಾರ್ಯಕಾರಿಣಿಯಲ್ಲಿ ಭಾಗಿಯಾಗದೇ ದಿಢೀರ್ ರಾಜ್ಯಕ್ಕೆ ವಾಪಸ್ ಆಗಿದ್ದು, ಕಳೆದ ಮೂರು ದಿನಗಳಿಂದ ‘ಆಪರೇಷನ್ ಕಮಲ’ದ ರಣತಂತ್ರಕ್ಕಾಗಿ ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ನೇತೃತ್ವದಲ್ಲಿ ಉಮೇಶ್ ಕತ್ತಿ, ಬಿ.ವೈ. ರಾಘವೇಂದ್ರ, ಬಿ. ಶ್ರೀರಾಮುಲು, ಶೋಭಾ ಕರಂದ್ಲಾಜೆಯವರುಗಳಿಗೆ ಸರ್ಕಾರ ಉರುಳಿಸುವ ಹೊಣೆಗಾರಿಕೆ ನೀಡಲಾಗಿದ್ದು, ಈಗಾಗಲೇ ಈ ಕುರಿತು ತಂತ್ರ ರೂಪಿಸಲಾಗಿದೆ. ಕಾಂಗ್ರೆಸ್- ಜೆಡಿಎಸ್ ನ 16 ರಿಂದ 23 ಶಾಸಕರನ್ನು ಒಟ್ಟು ನಾಲ್ಕು ಹಂತಗಳ ಮೂಲಕ ‘ಆಪರೇಷನ್‍ ಕಮಲ’ ಖೆಡ್ಡಾಗೆ ಬೀಳಿಸಲು ತಂತ್ರ ಹೆಣೆಯಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಮೊದಲ ಹಂತದಲ್ಲಿ ಉತ್ತರ ಕರ್ನಾಟಕದ 11 ಶಾಸಕರ ಒಂದು ಗುಂಪನ್ನು ಬಿಜೆಪಿಗೆ ಸೆಳೆಯಲು ಯತ್ನ ನಡೆಸಲಾಗಿದ್ದು, ಈ ಗುಂಪು ಪ್ರಮುಖವಾಗಿರಲಿದೆ. ಎರಡನೇಯ ಹಂತದಲ್ಲಿ ಬೆಂಗಳೂರಿಗೆ ಹತ್ತಿರದ ಎರಡು ಜಿಲ್ಲೆಯ ಕಾಂಗ್ರೆಸ್, ಜೆಡಿಎಸ್ ನ 4 ಶಾಸಕರಿಗೆ ಗಾಳ ಹಾಕಲು ಬಿಜೆಪಿ ಯೋಜನೆ ರೂಪಿಸಿದೆ. ಮೂರನೇ ಹಂತದಲ್ಲಿ ಮಧ್ಯ ಕರ್ನಾಟಕ, ಹೈದರಾಬಾದ್ ಕರ್ನಾಟಕದ 4 ಕಾಂಗ್ರೆಸ್ ಶಾಸಕರಿಗೆ ಮಾತ್ರ ಸ್ಕೆಚ್ ಹಾಕಿದೆ. ಇನ್ನು ನಾಲ್ಕನೇ ಹಂತದಲ್ಲಿ ಬೆಂಗಳೂರು, ಮಲೆನಾಡು ಭಾಗದ ಮೂವರು ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಲು ತಂತ್ರ ಹೆಣೆದಿದೆ ಎನ್ನಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕು ಎಂಬ ಪಣ ತೊಟ್ಟಿರುವ ಬಿಜೆಪಿ, ‘ಆಪರೇಷನ್ ಕಮಲ’ದ ಮೂಲಕ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ತಮ್ಮತ್ತ ಸೆಳೆದುಕೊಂಡು, ಆ ಮೂಲಕ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಯತ್ನಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕಮಲ ಪಾಳೆಯ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...