alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಯಡಿಯೂರಪ್ಪ

Yeddyurappa_68003ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಅಧಿಕಾರ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಗಳಾಗುತ್ತಿದ್ದು, ಜೆಡಿಎಸ್ ನ ಮೂವರು ಹಾಗೂ ಕಾಂಗ್ರೆಸ್ ನ ಒಬ್ಬ ಶಾಸಕರು ಬಿಜೆಪಿ ಸೇರಲಿದ್ದಾರೆಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ.

ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ಜೊತೆ ಭಿನ್ನಾಭಿಪ್ರಾಯ ಹೊಂದಿರುವ ಮಾಗಡಿ ಕ್ಷೇತ್ರದ ಶಾಸಕ ಬಾಲಕೃಷ್ಣ, ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿ ಸೇರುವ ಹಾದಿಯಲ್ಲಿದ್ದಾರೆನ್ನಲಾಗಿದ್ದು, ಹಾಗೇ ಚನ್ನಪಟ್ಟಣ ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ಸಹ ಇದೇ ಮಾರ್ಗ ಹಿಡಿಯಲಿದ್ದಾರೆಂದು ಹೇಳಲಾಗುತ್ತಿದೆ.

ಯುಗಾದಿಯಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಮ್ಮ ನೇಮಕವಾಗುತ್ತಿದ್ದಂತೆಯೇ ಮಾತನಾಡಿದ್ದ ಯಡಿಯೂರಪ್ಪ, ಪಕ್ಷ ತೊರೆದಿರುವವರೂ ಸೇರಿದಂತೆ ಬಿಜೆಪಿ ಒಲವುಳ್ಳ ಎಲ್ಲರಿಗೂ ಪಕ್ಷ ಸೇರ್ಪಡೆಗೆ ಆಹ್ವಾನ ನೀಡಿದ್ದರು. ಹೀಗಾಗಿ ಬಿಜೆಪಿಯಿಂದ ಹೊರಗಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಧನಂಜಯ್ ಕುಮಾರ್ ಮೊದಲಾದವರು ಮತ್ತೇ ಬಿಜೆಪಿಗೆ ಸೇರ್ಪಡೆಗೊಳ್ಳಲು ಮುಂದಾಗಿರುವ ಮಧ್ಯೆ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರೂ ಬಿಜೆಪಿಯತ್ತ ಮುಖ ಮಾಡಿರುವುದು ಕುತೂಹಲ ಮೂಡಿಸಿದೆ. ಆದರೆ ಕೆಲವರ ಪ್ರಕಾರ, ಸರ್ಕಾರದ ಅವಧಿ ಇನ್ನೂ ಎರಡು ವರ್ಷಗಳಿದ್ದು, ಈಗ ಬಿಜೆಪಿ ಸೇರ್ಪಡೆಗೊಳ್ಳುವ ಮೂಲಕ ಶಾಸಕ ಸ್ಥಾನ ಕಳೆದುಕೊಳ್ಳಲು ಯಾರೂ ಮುಂದಾಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಈ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ ಎನ್ನುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...