alex Certify
ಕನ್ನಡ ದುನಿಯಾ       Mobile App
       

Kannada Duniya

‘ಆಪರೇಷನ್ ಕಮಲ’ಕ್ಕೆ ‘ಡಾಕ್ಟರ್’ ಸುಧಾಕರ್ ಹೇಳಿದ್ದೇನು…?

ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಕಾಂಗ್ರೆಸ್ ನ ಕೆಲ ಶಾಸಕರು ಆಪರೇಷನ್ ಕಮಲಕ್ಕೊಳಗಾಗಿ ಮುಂಬೈಗೆ ತೆರಳಿದ್ದಾರೆಂಬ ವದಂತಿಗಳ ಬೆನ್ನಲ್ಲೇ ಈ ಶಾಸಕರ ಪೈಕಿ ಒಬ್ಬರೆಂದು ಹೇಳಲಾಗಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ. ಸುಧಾಕರ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿರುವ ಸುಧಾಕರ್, ನಾನೊಬ್ಬ ಡಾಕ್ಟರ್ ಆಗಿದ್ದು, ಆಪರೇಷನ್ ಕಮಲಕ್ಕೊಳಗಾಗುವುದಿಲ್ಲ. ತಾವು, ಹೊಸಕೋಟೆ ಕ್ಷೇತ್ರದ ಶಾಸಕ ಎಂಟಿಬಿ ನಾಗರಾಜ್ ಮತ್ತು ಕೆಲ ಸ್ನೇಹಿತರೊಂದಿಗೆ ತಮಿಳುನಾಡಿನ ದೇವಾಲಯಕ್ಕೆ ಭೇಟಿ ನೀಡಿದ್ದು, ಆದರೆ ಇದನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ತಿಳಿಸಿದ್ದಾರೆ.

ತಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ನಾಯಕತ್ವ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ನಂಬುತ್ತೇನೆ ಎಂದು ಹೇಳಿರುವ ಡಾ. ಸುಧಾಕರ್, ರಾಹುಲ್ ಗಾಂಧಿ ಜೊತೆ ಇರುವ ಫೋಟೋಗಳನ್ನು ಇದರ ಜೊತೆಗೆ ಪೋಸ್ಟ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...