alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರಿಗೆ ಶಾಕ್: ಬೆಂಬಲ ಬೆಲೆ ಘೋಷಿಸಿದರೂ ಆರಂಭಿಸಿಲ್ಲ ಖರೀದಿ ಕೇಂದ್ರ

ರಾಜ್ಯ ಸರ್ಕಾರ, ಕೇವಲ ಘೋಷಣೆಗಳನ್ನು ಮಾತ್ರ ಮಾಡುತ್ತದೆ. ಅದನ್ನು ಕಾರ್ಯಗತಗೊಳಿಸುವುದಿಲ್ಲ ಎಂಬ ಆರೋಪದ ಮಧ್ಯೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ್ದರೂ, ಬೆಳೆಯನ್ನು ಖರೀದಿಸಲು ರಾಜ್ಯ ಸರ್ಕಾರ ಖರೀದಿ ಕೇಂದ್ರ ಆರಂಭಿಸದಿರುವುದು ರೈತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ಬೆಲೆ ಕುಸಿತದ ಕಾರಣ ಕೇಂದ್ರ ಸರ್ಕಾರ, ಭತ್ತ, ಮೆಕ್ಕೆಜೋಳ, ಈರುಳ್ಳಿ, ಸೇರಿದಂತೆ ಕೆಲ ಪ್ರಮುಖ ಬೆಳೆಗಳಿಗೆ ಮೂರು ತಿಂಗಳ ಹಿಂದೆಯೇ ಬೆಂಬಲ ಬೆಲೆ ಘೋಷಿಸಿದೆ. ಆದರೆ ರಾಜ್ಯ ಸರ್ಕಾರ ಈವರೆಗೂ ಖರೀದಿ ಕೇಂದ್ರವನ್ನು ಆರಂಭಿಸದಿರುವುದು ರೈತರಿಗೆ ಸಂಕಷ್ಟ ತಂದೊಡ್ಡಿದೆ.

ಈರುಳ್ಳಿ ಬೆಲೆ ಕುಸಿತದ ಕಾರಣ ಬಾಗಲಕೋಟೆಯಲ್ಲಿ ರೈತರು ರಸ್ತೆಗೆ ಈರುಳ್ಳಿ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಭತ್ತ ಹಾಗೂ ಮೆಕ್ಕೆಜೋಳ ಈಗಾಗಲೇ ಮಾರುಕಟ್ಟೆಗೆ ಬರುತ್ತಿದೆ. ಹೀಗಿದ್ದರೂ ಖರೀದಿ ಕೇಂದ್ರ ಆರಂಭಿಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದರಿಂದ ಪ್ರತಿಭಟನೆ ನಡೆಸಲು ರೈತರು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...