alex Certify
ಕನ್ನಡ ದುನಿಯಾ       Mobile App
       

Kannada Duniya

ಹುಬ್ಬಳ್ಳಿಯ ಮೌಲ್ವಿ ಅರೆಸ್ಟ್

ಹುಬ್ಬಳ್ಳಿ: ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿದ್ದ ಮೌಲ್ವಿ ಅಬ್ದುಲ್ ಹಮೀದ್ ಖೈರಾತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪಾಕಿಸ್ತಾನವನ್ನು ನೋಡಲು ಅಲ್ಲಿಗೇ ಹೋಗಬೇಕಿಲ್ಲ. ಹುಬ್ಬಳ್ಳಿಯ ಗಣೇಶ ಪೇಟೆ ಪಾಕಿಸ್ತಾನದಂತೆ ಕಾಣುತ್ತದೆ ಎಂದು ಖೈರಾತಿ ಹೇಳಿಕೆ ನೀಡಿದ್ದು, ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಖೈರಾತಿ ಪಾಕಿಸ್ತಾನ ಪರವಾಗಿ ನೀಡಿದ್ದ ಹೇಳಿಕೆಯ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈದ್ ಮಿಲಾದ್ ಸಂದರ್ಭದಲ್ಲಿ ಅವರು ಪಾಕ್ ಪರವಾಗಿ ಹೇಳಿಕೆ ನೀಡಿ ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಬುಧವಾರ ರಾತ್ರಿ ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಖೈರಾತಿ ಅವರನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಮೌಲ್ವಿಯ ತಲೆ ಕಡಿದವರಿಗೆ 10 ಲಕ್ಷ ರೂ. ನೀಡುವುದಾಗಿ ಬಿ.ಜೆ.ಪಿ. ಯುವ ಮೋರ್ಚಾ ಮುಖಂಡರೊಬ್ಬರು ಘೋಷಿಸಿದ್ದರು.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...