alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿಗರಿಗೆ ಗುಡ್ ನ್ಯೂಸ್: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮಹತ್ವದ ತೀರ್ಮಾನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಳ್ಳಲು ಮುಂದಾಗಿದೆ.

ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ತರುವ ಸಂಬಂಧ ವಿಸ್ತೃತ ಯೋಜನಾ ವರದಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಎತ್ತಿನಹೊಳೆ ಯೋಜನೆಯಿಂದ ಲಭ್ಯವಾಗುವ ನೀರನ್ನೂ ಬಳಸಿಕೊಳ್ಳಲು ಚಿಂತಿಸಲಾಗಿದೆ.

ಬೆಂಗಳೂರಿನಲ್ಲಿ ಸೋಮವಾರ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಬೆಂಗಳೂರು ಅಭಿವೃದ್ಧಿ ಮುನ್ನೋಟದ ಕುರಿತ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, 300 ಕಿಮೀ ದೂರದಲ್ಲಿರುವ ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ತರುವುದು ಅಸಾಧ್ಯವೇನೂ ಅಲ್ಲ. ಹೀಗಾಗಿ ಇದನ್ನು ಪರಿಶೀಲಿಸಿ ವಿಸ್ತೃತ ಯೋಜನಾ ವರದಿ ತಯಾರಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...