alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ನಲ್ಲಿ ಬಿರುಸುಗೊಂಡ ಚಟುವಟಿಕೆ

congres

ಬೆಂಗಳೂರು: ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ವಿದೇಶಕ್ಕೆ ತೆರಳುತ್ತಿದ್ದಂತೆ, ಕಾಂಗ್ರೆಸ್ ನಲ್ಲಿ ಚಟುವಟಿಕೆ ಬಿರುಸುಗೊಂಡಿದೆ.

ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದ್ದು, ಈಗಾಗಲೇ ಹಲವರು ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.

ಮತ್ತೊಂದು ಬೆಳವಣಿಗೆಯಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರಲು ಲಾಬಿ ಶುರುವಾಗಿದೆ.

ಕರ್ನಾಟಕ ನೀರಾವರಿ ನಿಗಮದ ಕಚೇರಿ ಸಭಾಂಗಣದಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನದ ಕುರಿತಂತೆ ಹಿರಿಯ ಸಚಿವರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ.

ಡಿ.ಕೆ. ಶಿವಕುಮಾರ್, ಆರ್.ವಿ. ದೇಶಪಾಂಡೆ, ಹೆಚ್.ಸಿ. ಮಹಾದೇವಪ್ಪ, ಕೃಷ್ಣ ಭೈರೇಗೌಡ, ಎಂ.ಬಿ. ಪಾಟೀಲ್, ರಮೇಶ್ ಕುಮಾರ್, ಡಿ.ಕೆ. ಸುರೇಶ್, ಪ್ರಿಯಾಂಕ್ ಖರ್ಗೆ ಮೊದಲಾದವರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ನೇಮಿಸಬೇಕೆಂದು ಹೈಕಮಾಂಡ್ ಗೆ ಮನವಿ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ಪರಮೇಶ್ವರ್ ಅಧ್ಯಕ್ಷ ಸ್ಥಾನದ ಅವಧಿ ಮುಗಿದಿದೆ. ಹೈಕಮಾಂಡ್ ಸೂಚಿಸಿದರೆ, ಅಧ್ಯಕ್ಷ ಸ್ಥಾನ ಬಿಟ್ಟುಕೊಡುತ್ತೇನೆ ಎಂದು ಅವರು ಈಗಾಗಲೇ ತಿಳಿಸಿದ್ದರೂ, ಮುಂದಿನ ಚುನಾವಣೆಗೂ ಸಾರಥ್ಯ ವಹಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...