alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯ ವಾಸವಾಗಿದ್ದ ಬಂಗಲೆಯೇ ಬೇಕೆಂದು ಪಟ್ಟು ಹಿಡಿದಿರುವ ಪರಮೇಶ್ವರ್?

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಾಸವಾಗಿದ್ದ ‘ಕಾವೇರಿ’ ನಿವಾಸವನ್ನು ತಮಗೆ ನೀಡುವಂತೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಪಟ್ಟು ಹಿಡಿದಿದ್ದಾರೆಂದು ಹೇಳಲಾಗಿದೆ.

ಸಂದರ್ಭ ಸಿಕ್ಕಾಗಲೆಲ್ಲ ಸಿದ್ದರಾಮಯ್ಯನವರ ವಿರುದ್ದ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿರುವ ಪರಮೇಶ್ವರ್, ಈಗ ನಿವಾಸದ ವಿಷಯದಲ್ಲೂ ಇದನ್ನು ಮುಂದುವರಿಸಿದ್ದಾರೆಂದು ಹೇಳಲಾಗುತ್ತಿದೆ.

‘ಕಾವೇರಿ’ಯನ್ನು ತಮ್ಮ ಅಧಿಕೃತ ನಿವಾಸವನ್ನಾಗಿ ಬಳಸಿಕೊಳ್ಳಲು ಅವಕಾಶ ನೀಡುವಂತೆ ಪರಮೇಶ್ವರ್ ಕೋರಿರುವುದರ ಕುರಿತು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಸದ್ಯಕ್ಕೆ ಯಾವುದೇ ನಿರ್ಧಾರವನ್ನು ಕೈಗೊಳ್ಳದಿರಲು ತೀರ್ಮಾನಿಸಿದ್ದು, ಚಿಕಿತ್ಸೆಗಾಗಿ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿರುವ ಸಿದ್ದರಾಮಯ್ಯನವರು ಮರಳಿ ಬಂದ ಬಳಿಕವೇ ಪರಿಶೀಲಿಸಲಿದ್ದಾರೆಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...