alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಪರಮೇಶ್ವರ್ ಟಾಂಗ್

ಈ ಹಿಂದೆ ತಾವು ಬಜೆಟ್ ಮಂಡಿಸಿರುವ ಕಾರಣ ಈಗ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಹೊಸ ಬಜೆಟ್ ಮಂಡಿಸುವ ಬದಲು ಪೂರಕ ಬಜೆಟ್ ಮಂಡಿಸುವುದು ಸೂಕ್ತ ಎಂದು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ಹೊಸ ಬಜೆಟ್ ಮಂಡಿಸುವುದು ವಾಡಿಕೆ. ನೂತನ ಸರ್ಕಾರಕ್ಕೆ ಅದರದ್ದೇ ಆದ ಯೋಜನೆಗಳಿರುತ್ತವೆ. ಅದನ್ನು ಬಜೆಟ್ ನಲ್ಲಿ ಘೋಷಿಸುವುದು ಸ್ವಾಭಾವಿಕ ಎಂದಿದ್ದಾರೆ.

ಸಿದ್ದರಾಮಯ್ಯನವರು ಯಾವ ಅರ್ಥದಲ್ಲಿ ಹೊಸ ಬಜೆಟ್ ಮಂಡನೆ ಮಾಡಬಾರದೆಂದು ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರವನ್ನು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಬಜೆಟ್ ಮಂಡನೆ ಕುರಿತು ಸಿದ್ದರಾಮಯ್ಯನವರ ನಿಲುವಿಗೆ ವ್ಯತಿರಿಕ್ತ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ ಜಿ. ಪರಮೇಶ್ವರ್, ಹೊಸ ಬಜೆಟ್ ಮಂಡಿಸುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ತೀರ್ಮಾನವನ್ನು ಬೆಂಬಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...