alex Certify
ಕನ್ನಡ ದುನಿಯಾ       Mobile App
       

Kannada Duniya

ಪೋಷಕರ ಹತ್ಯೆಗೆ ಸಂಚು ರೂಪಿಸಿ ಜೈಲು ಸೇರಿದ್ದ ಎಂಜಿನಿಯರಿಂಗ್ ಪದವೀಧರನಿಂದ ಆತ್ಮಹತ್ಯೆ ಯತ್ನ

ಬೆಂಗಳೂರು: ತಂದೆ-ತಾಯಿಯನ್ನೇ ಕೊಲ್ಲಲು ಸಂಚು ರೂಪಿಸಿ ಜೈಲು ಪಾಲಾಗಿದ್ದ ಎಂಜಿನಿಯರಿಂಗ್ ಪದವೀಧರನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದಿದೆ.

ತಂದೆ-ತಾಯಿ ಬೈದರು ಎಂಬ ಕಾರಣಕ್ಕೆ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿ ವಿಫಲನಾದ ಶರತ್ ಎಂಬಾತ ಕೊನೆಗೆ ಅವರನ್ನೇ ಗುಂಡಿಟ್ಟು ಹತ್ಯೆ ಮಾಡಲು ಮುಂದಾಗಿದ್ದ. ಈ ಕಾರಣಕ್ಕೆ ಜುಲೈ 5 ರಂದು ಬಸವೇಶ್ವರ ನಗರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ. ಬಳಿಕ ಶರತ್ ನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದರಿಂದ ಪರಪ್ಪನ ಅಗ್ರಹಾರ ಜೈಲು ಸೇರಿದ್ದ.

ಆ.21ರಂದು ಶರತ್ ಜೈಲಿನ ಕೊಠಡಿಯಲ್ಲಿ ತನ್ನ ಉಡುದಾರದಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಗಮನಿಸಿದ ಜೈಲು ವೀಕ್ಷಕ ನಿಜಲಿಂಗಪ್ಪ ಅಂಬಿಗೇರ್ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶರತ್ ಆಗಾಗ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಲೇ ಇದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ವಿಡಿಯೋಗಳನ್ನು ನೋಡುತ್ತಿದ್ದ ಎನ್ನಲಾಗಿದೆ. ಹೀಗೆ ಆತ್ಮಹತ್ಯೆಗೆ ಯತ್ನಿಸುತ್ತಲೇ ಇರುವುದು ಈತನಿಗೊಂದು ಖಯಾಲಿಯಾಗಿಬಿಟ್ಟಿದೆ. ಈ ಹಿನ್ನಲೆಯಲ್ಲಿ ಆತನಿಗೆ ಮನೋವೈದ್ಯರಿಂದ ಚಿಕಿತ್ಸೆ ನೀಡಲು ಜೈಲಾಧಿಕಾರಿಗಳು ನಿರ್ಧರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...