alex Certify
ಕನ್ನಡ ದುನಿಯಾ       Mobile App
       

Kannada Duniya

ಪರಪ್ಪನ ಅಗ್ರಹಾರ ಕರ್ಮಕಾಂಡ: ಸೋಮವಾರದಿಂದ ತನಿಖೆ

download

ಪರಪ್ಪನ  ಅಗ್ರಹಾರ ಜೈಲಿನಲ್ಲಿ ನಡೆದ ಕರ್ಮಕಾಂಡ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರದಿಂದ ತನಿಖೆ ಶುರುವಾಗಲಿದೆ. ಸೋಮವಾರದಿಂದ ಸಮಗ್ರ ತನಿಖೆ ನಡೆಯಲಿದೆ ಎಂದು ತನಿಖಾಧಿಕಾರಿ ವಿನಯ್ ಕುಮಾರ್ ಹೇಳಿದ್ದಾರೆ.

ಈ ನಡುವೆ ಡಿಐಜಿ ರೂಪಾ ಇನ್ನೊಂದು ವರದಿ ಸಿದ್ಧಪಡಿಸಿದ್ದಾರೆ ಎನ್ನಲಾಗಿದೆ. ಆದ್ರೆ ಇನ್ನೂ ರೂಪಾ ವರದಿಯನ್ನು ಮೇಲಿನ ಅಧಿಕಾರಿಗಳಿಗೆ ನೀಡಿಲ್ಲ. ವರದಿಯಲ್ಲಿ ರೂಪಾ, ಶಶಿಕಲಾ ಕೋಣೆಯಲ್ಲಿ ಸಿಸಿ ಟಿವಿ ಇಲ್ಲ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆಂದು ಮಾಧ್ಯಮ ಮೂಲಗಳು ಹೇಳಿವೆ. ಸಿಎಂ ಆದೇಶದ ಮೇರೆಗೆ ವರದಿಯನ್ನು ಗೌಪ್ಯವಾಗಿಡಲಾಗಿದೆ.

ಈ ಮಧ್ಯೆ ಡಿಜಿಪಿ ಸತ್ಯನಾರಾಯಣ ರಾವ್ ಶನಿವಾರ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದಾರೆ. ಬೆಳಿಗ್ಗೆ ಭೇಟಿ ನೀಡಿದ ಸತ್ಯನಾರಾಯಣ್ ರಾವ್ ಸುಮಾರು ಎರಡು ಗಂಟೆಗಳ ಕಾಲ ಜೈಲಿನೊಳಗೆ ಪರಿಶೀಲನೆ ನಡೆಸಿದ್ದಾರೆ. ಸೋಮವಾರದಿಂದ ತನಿಖೆ ನಡೆಯುವ ಸಾಧ್ಯತೆ ಇರುವುದರಿಂದ ಪರಪ್ಪನ ಅಗ್ರಹಾರದಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಹಾಗೆ ಡಿಐಜಿ ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸತ್ಯನಾರಾಯಣ ರಾವ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ರೂಪಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ವರದಿ ನೀಡಿದ್ದರು. ಇದ್ರಲ್ಲಿ ಸತ್ಯರಾಯಣರಾವ್ ಹೆಸರಿತ್ತು. ಅವರು 2 ಕೋಟಿ ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಎಂ ಸಿದ್ಧರಾಮಯ್ಯ ಆದೇಶ ನೀಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...