alex Certify
ಕನ್ನಡ ದುನಿಯಾ       Mobile App
       

Kannada Duniya

ಪಾರ್ಕ್ ನಲ್ಲಿ ಕುಳಿತಿದ್ದ ಜೋಡಿ, ಏನಾಯ್ತು ಗೊತ್ತಾ..?

ballary

ಬಳ್ಳಾರಿ: ಅನ್ಯ ಕೋಮಿಗೆ ಸೇರಿದ ಯುವಕ, ಯುವತಿ ಜೊತೆಯಾಗಿದ್ದ ಸಂದರ್ಭದಲ್ಲಿ ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ದಾಳಿ ಮಾಡುವ ಪ್ರಕರಣ ಕರಾವಳಿ ಜಿಲ್ಲೆಗಳಲ್ಲಿ ನಡೆದಿದ್ದು, ವರದಿಯಾಗಿತ್ತು.

ಅದೇ ರೀತಿ ಬಳ್ಳಾರಿ ಜಿಲ್ಲೆಯಲ್ಲಿಯೂ ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಪಾರ್ಕ್ ನಲ್ಲಿ ಕುಳಿತು ಮಾತಾಡುತ್ತಿದ್ದ ಯುವಕ, ಯುವತಿಯ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಅನ್ಯ ಕೋಮಿನ ಸ್ನೇಹಿತರಿಬ್ಬರು ಬಳ್ಳಾರಿಯ ರೇಡಿಯೋ ಪಾರ್ಕ್ ನಲ್ಲಿ ಕುಳಿತು ಮಾತನಾಡುವಾಗ, 7-8 ಮಂದಿ ಇದ್ದ ಯುವಕರ ಗುಂಪು ಸುತ್ತುವರೆದು ಥಳಿಸಿದೆ. ಇಬ್ಬರ ಫೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.

ಇದರಿಂದ ಕಂಗಾಲಾದ ಯುವಕ, ಯುವತಿ ಬಳ್ಳಾರಿಯ ಕೌಲ್ ಬಜಾರ್ ಠಾಣೆಗೆ ತೆರಳಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...