alex Certify
ಕನ್ನಡ ದುನಿಯಾ       Mobile App
       

Kannada Duniya

ಪಾರ್ವತಮ್ಮ ಅಂತ್ಯಕ್ರಿಯೆ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎಂದು ದೂರು ಸಲ್ಲಿಕೆ

parvatamma-rajkumarವರನಟ ಡಾ. ರಾಜ್ ಕುಮಾರ್ ಅವರ ಧರ್ಮಪತ್ನಿ ಪಾರ್ವತಮ್ಮ ರಾಜ್ ಕುಮಾರ್ ರ ಅಂತ್ಯಕ್ರಿಯೆ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ವಕೀಲರೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.

ಬೆಂಗಳೂರಿನ ವಿಜಯನಗರದ ವಕೀಲ ಚೇತನ್ ಎಂಬವರು ಈ ದೂರನ್ನು 24 ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಿಸಿದ್ದು, ಪಾರ್ವತಮ್ಮನವರ ಅಂತ್ಯಕ್ರಿಯೆ ವೇಳೆ ಅವರ ಪಾರ್ಥಿವ ಶರೀರವನ್ನು ರಾಷ್ಟ್ರಧ್ವಜದಲ್ಲಿ ಸುತ್ತಲಾಗಿದೆ. ಇದರಿಂದ ರಾಷ್ಟ್ರಧ್ವಜಕ್ಕೆ ಅಪಮಾನವಾಗಿದೆ ಎಂದಿದ್ದಾರೆ.

ಸೇನಾಧಿಕಾರಿಗಳ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜವನ್ನು ಸುತ್ತಲು ಅವಕಾಶವಿದೆ. ಖಾಸಗಿ ವ್ಯಕ್ತಿಗಳ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಸುತ್ತುವಂತಿಲ್ಲ. ಹೀಗಾಗಿ ನಿಯಮ ಉಲ್ಲಂಘನೆಯಾಗಿದೆ ಎಂದು ತಮ್ಮ ದೂರಿನಲ್ಲಿ ತಿಳಿಸಿರುವ ಚೇತನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರ ವಿರುದ್ದ ಖಾಸಗಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...